Site icon Ullalavani

ಹರೇಕಳ: ಗಾಂಜಾ ಸಾಗಾಟ ಆರೋಪಿಗಳ ಬಂಧನ

UN NETWORKS

ಹರೇಕಳ: ಹರೇಕಳ ಗ್ರಾಮದ ಬಾವಲಿಗುರಿ ಬಸ್ ನಿಲ್ದಾಣದ ಬಳಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ಬಾವಲಿಗುರಿಯ ಮಹಮ್ಮದ್ ಯಾನೆ ಮಾಮು(42), ನ್ಯೂಪಡ್ಪುವಿನ ಮಹಮ್ಮದ್ ನಿಝಾಮ್(24) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 500 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಹರೇಕಳ ಗ್ರಾಮದ ನ್ಯೂಪಡ್ಪು ಎಂಬಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಮಂಜನಾಡಿ ಮಂಗಳಾಂತಿಯ ಅಹ್ಮದ್ ಕಬೀರ್(32) ಎಂಬಾತನನ್ನು ಕೂಡಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಕೊಣಾಜೆ ಠಾಣಾ ಅಧಿಕಾರಿ, ಸಿಬ್ಬಂದಿ ಮತ್ತು ಮಂಗಳೂರು ದಕ್ಷಿಣ ರೌಡಿ ನಿಗ್ರಹ ದಳದ ಸಿಬ್ಬಂದಿಯವರು ಭಾಗವಹಿಸಿದ್ದರು.

Exit mobile version