Site icon Ullalavani

ಅಪಘಾತ ಫಿಶರೀಸ್ ಕಾಲೇಜು ಸಿಬ್ಬಂದಿ ದಾರುಣ ಸಾವು

UN NETWORKS

ಉಳ್ಳಾಲ: ಸ್ಕೂಟರಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಸ್ಕೂಟರ್ ಸವಾರನ ಮೇಲೆ ಲಾರಿಯೊಂದು ಚಲಿಸಿ ಸವಾರ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಜೆಪ್ಪಿನಮೊಗೆರು ಸಮೀಪ ಭಾನುವಾರ ಮಧ್ಯಾಹ್ನ ಸಂಭವಿಸಿದೆ.

ಎಕ್ಕೂರಿನ ಫಿಶರೀಸ್ ಕಾಲೇಜಿನ ಪ್ರಯೋಗಾಲಯದ ಹಿರಿಯ ಸಹಾಯಕ ಹುದ್ದೆಯನ್ನು ನಿರ್ವಹಿಸುತ್ತಿದ್ದ ದೇರೆಬೈಲ್ ನಿವಾಸಿ ಕೃಷ್ಣ (55) ಮೃತಪಟ್ಟವರು. ವೈಯಕ್ತಿಕ ಕೆಲಸದ ನಿಮಿತ್ತ ತೊಕ್ಕೊಟ್ಟು ಕಡೆಗೆ ಬಂದವರು ಮರಳಿ ಮನೆಗೆ ವಾಪಸ್ಸಾಗುವ ಸಂದರ್ಭ ಘಟನೆ ಸಂಭವಿಸಿದೆ.

ಹಿಂಬದಿಯಿಂದ ಬರುತ್ತಿದ್ದ ಕಾರು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಎಡಕ್ಕೆ ಉರುಳಿದರೆ, ಸವಾರ ಬಲಕ್ಕೆ ರಸ್ತೆಯ ಮಧ್ಯಭಾಗಕ್ಕೆ ಬಿದ್ದಿದ್ದರು. ಅದೇ ವೇಳೆ ಹಿಂಬದಿಯಿಂದ ಬಂದ ಲಾರಿ ಅವರ ಮೇಲೆಯೇ ಚಲಿಸಿದ ಪರಿಣಾಮ ಸ್ಥಳದಲ್ಲಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ತಲೆಯಲ್ಲಿ ಹೆಲ್ಮೆಟ್ ಧರಿಸಿದ್ದರೂ, ಕಂಟೈನರ್ ಲಾರಿ ಚಲಿಸಿದ ಪರಿಣಾಮ ಹೆಲ್ಮೆಟ್ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಮಂಗಳೂರು ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Exit mobile version