UN NETWORKS
ಕೊಣಾಜೆ: ಕೊಣಾಜೆ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ದಾಖಲಾಗಿದ್ದ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯಿಂದ 300 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆಯಲ್ಲಿ ಕೊಣಾಜೆ ಪೊಲೀಸ್ ನಿರೀಕ್ಷಕರಾದ ಅಶೋಕ್ ಪಿ, ಸಿಬ್ಬಂದಿಗಳಾದ ಅಶೋಕ್ ಕುಮಾರ್, ನಾಗರಾಜ್, ಉಮೇಶ್ ರಾಠೋಡ್ ಹಾಗೂ ದಕ್ಷಿಣ ಉಪವಿಭಾಗದ ರೌಡಿ ನಿಗ್ರಹದಳದ ಸಿಬ್ಬಂದಿಯವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.