UN NETWORKS
ತೊಕ್ಕೊಟ್ಟು: ಮೇಲ್ಸೇತುವೆ ಹಾಗೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಡಿಸೆಂಬರ್ ಅಂತ್ಯದೊಳಗೆ ಮುಗಿಸಿತ್ತೇವೆ ಎಂದು ಭರವಸೆ ನೀಡಿರುವ ಸಂಸದರು ನೀಡಿರುವ ಭರವಸೆ ಹುಸಿಯಗಿದ್ದು ಕೊಟ್ಟ ಮಾತನ್ನು ಉಳಿಸಿ ಬಳಿಕ ಚುನಾವಣೆಗೆ ಮತ ಕೇಳಲು ಬನ್ನಿ ಎಂದು ಎಂದು ವಿಧಾನ ಪರಿಷರ್ತ ಸದಸ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸಲಹೆ ನೀಡಿದರು.
ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿ ವಿಳಂಬಕ್ಕೆ ಯು.ಟಿ. ಖಾದರ್ ಕಾರಣ ಎಂದು ಬಿಜೆಪಿ ಆರೋಪಿಸುತ್ತಿದೆ. ಸಂಸದ, ಶಾಸಕರ ಜವಾಬ್ದಾರಿ ಬಗ್ಗೆ ಅರಿಯದವರು ಶಾಸಕ ಸ್ಥಾನಕ್ಕೆ ಸ್ಪರ್ಧಿಸಿದರೆ ಏನಾಗಬಹುದು ಎನ್ನುವುದನ್ನು ಇಂಹತ ಹೇಳಿಕೆಗಳಿಂದ ತಿಳಿಯಬಹುದು. ಗೋವಿನ ಕುರಿತಾಗಿ ವಿಧಾನಸಭಾ ಚುನಾವಣೆ ಸಂದರ್ಭ ಮಂಗಳೂರು ಕ್ಷೇತ್ರದಲ್ಲಿ ಭಾರೀ ಪ್ರತಿಭಟನೆ ನಡೆಸಿದ್ದ ಬಿಜೆಪಿ, ಹಿಂದು ಸಂಘಟನೆ ಮುಖಂಡರು ಗೋ ಸಾಗಾಟದಲ್ಲಿಸಂಘಟನೆ ಕಾರ್ಯಕರ್ತರು ಸಿಕ್ಕಿಬಿದ್ದಾಗ ಮೌನವಾಗಿದೆ. ಶೀರೂರು ಶ್ರೀ, ಗೌರೀ ಲಂಕೇಶ್ ಹತ್ಯೆ ಬಗ್ಗೆ ಹಿಂದು ಸಂಘಟನೆಗಳು ಚಕಾರ ಎತ್ತುತ್ತಿಲ್ಲ ಎಂದು ಆರೋಪಿಸಿದರು.
ಮೂಡಾದ ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿ ಅಸೈಗೋಳಿ, ತಾಲೂಕು ಪಂಚಾಯಿತಿ ಅಧ್ಯಕ್ಷ ಮಹಮ್ಮದ್ ಮೋನು, ಸದಸ್ಯರುಗಳಾದ ಅಬ್ದುಲ್ ಜಬ್ಬಾರ್ ಬೋಳಿಯಾರ್, ಪದ್ಮಾವತಿ ಪೂಜಾರಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸುರೇಶ್ ಭಟ್ನಗರ, ಸಂಘಟನಾ ಕಾರ್ಯದರ್ಶಿ ಇಕ್ಬಾಲ್ ಸಾಮಾಣಿಗೆ, ಸಲೀಂ ಮೆಗಾ ಅಸೈಗೋಳಿ, ಹಿಂದುಳಿದ ವರ್ಗದ ಜಿಲ್ಲಾಧ್ಯಕ್ಷ ಸದಾಶಿವ ಉಳ್ಳಾಲ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಉಮ್ಮರ್ ಪಜೀರ್, ನಗರಸಭಾ ಅಧ್ಯಕ್ಷ ಹುಸೈನ್ ಕುಂಞ ಮೋನು, ಸದಸ್ಯರಾದ ದಿನೇಶ್ ರೈ, ಬಾಝಿಲ್ ಡಿಸೋಜ, ಕೊಣಾಜೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅಚ್ಚುತ ಗಟ್ಟಿ, ಎಪಿಎಂಸಿ ಉಪಾಧ್ಯಕ್ಷೆ ಮುತ್ತು ಶೆಟ್ಟಿ, ಮುಖಂಡ ಶ್ರೀನಿವಾಸ ಶೆಟ್ಟಿ ಪುಲ್ಲು, ಸುಹಾಸಿನಿ ಬಬ್ವುಕಟ್ಟೆ ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಕೋಡಿಜಾಲ್ ಕಾರ್ಯಕ್ರಮ ನಿರೂಪಿಸಿದರು.