UN NETWORKS
ಉಳ್ಳಾಲ: ಯಾವುದೇ ಸ್ಪರ್ಧೆಗಳಲ್ಲಿ ಪ್ರಶಸ್ತಿಗಿಂತ ಪಾಲ್ಗೊಳ್ಳುವಿಕೆ ಅತೀ ಅಗತ್ಯ. ಸೋಲು ಗೆಲುವನ್ನು ಒಂದೇ ರೀತಿಯಲ್ಲಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಂಡರೆ ಇಂದಿನ ಸೋಲು ಮುಂದಿನ ಗೆಲುವಿಗೆ ಹಾದಿಯಾಗಲಿದೆ ಎಂದು ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ರಾಜೇಶ್ವರೀ ಅಭಿಪ್ರಾಯಪಟ್ಟರು.
ಕಲ್ಲೇಕಾರುಗುತ್ತು ರತ್ನಾವತಿ ಕೊರಗಪ್ಪ ಶೆಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಲಾ ಮುಖ್ಯೋಪಾಧ್ಯಾಯಿನಿ ನಯೀಮ್ ಹಮೀದ್, ಉಪಸ್ಥಿತರಿದ್ದರು.ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ನಿರ್ದೇಶಕ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಸ್ವಾಗತಿಸಿದರು. ಶಿಕ್ಷಕ ರವಿ ಕುಮಾರ್ ಕೋಡಿ ಕಾರ್ಯಕ್ರಮ ನಿರ್ವಹಿಸಿದರು. ಶಾಲಾ ಸಂಚಾಲಕಿ ಸೌಮ್ಯ ಆರ್ ಶೆಟ್ಟಿ ವಂದಿಸಿದರು.