Site icon Ullalavani

ರಾಜ್ಯಮಟ್ಟಕ್ಕೆ ಆಯ್ಕೆ

UN NETWORKS

ತಲಪಾಡಿ: ಪುತ್ತೂರಿನ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ 17ರ ವಯೋಮಿತಿಯ ಬಾಲಕರ ತಂಡದಲ್ಲಿ ತಲಪಾಡಿಯ ಶಾರದಾ ವಿದ್ಯಾನಿಕೇತನದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಮೊಹಿತ್ ಕುಮಾರ್, ಪಬ್ಲಿಕ್ ಸ್ಕೂಲ್‍ನ ವಿದ್ಯಾರ್ಥಿಗಳಾದ ಹರ್ಷಿತ್ ಎಸ್., ದಿನೇಶ್ ಧರ್ಮ, ಮೋಹಿತ್ ಕುಮಾರ್ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಪುತ್ತೂರಿನ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ 17ರ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ತಲಪಾಡಿಯ ಶಾರದಾ ವಿದ್ಯಾನಿಕೇತನದ ವಿದ್ಯಾರ್ಥಿನಿಯರಾದ ಸುರಭಿ, ಸುನೈನಾ, ನಿಸರ್ಗ, ತೇಜಸ್ವಿನಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಪುತ್ತೂರಿನ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ 14 ವಯೋಮಿತಿಯ ಬಾಲಕರ ವಿಭಾಗದಲ್ಲಿ ತಲಪಾಡಿಯ ಶಾರದಾ ವಿದ್ಯಾನಿಕೇತನದ ವಿದ್ಯಾರ್ಥಿಗಳಾದ ದೇವರಾಜ್, ಧುನುಷ್ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Exit mobile version