UN NETWORKS
ಉಳ್ಳಾಲ: ಡಿವೈಎಫ್ ಐ ಉಳ್ಳಾಲ ವಲಯ ಸಮಿತಿ ಉಪಕಾರ್ಯದರ್ಶಿ ಹಾಗೂ ಡಿವೈಎಫ್ ಐ ಪಿಲಾರು ಘಟಕದ ಕಾರ್ಯದರ್ಶಿ ಪಿಲಾರು ಲಕ್ಷ್ಮೀಗುಡ್ಡೆಯ ಸಂದೇಶ್ ಶೆಟ್ಟಿ (31) ಶನಿವಾರ ಅಲ್ಪಕಾಲದ ಅಸೌಖ್ಯದಿಂದ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ವಿದ್ಯಾರ್ಥಿಯಾಗಿದ್ದಾಗಲೇ ಸಂಘಟನೆಗೆ ಸೇರಿದ ಇವರು ಸಿಪಿಎಂ ಪಕ್ಷದ ಸದಸ್ಯರಾಗಿ ಹೋರಾಟಗಳಲ್ಲಿ ಭಾಗಿಯಾಗಿದ್ದರು. ಮಂಗಳೂರು ತಾಲೂಕು ಕಚೇರಿಯಲ್ಲಿ ಖಾಸಗಿ ಸರ್ವೇಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಯುವಜನ ಸಂಘಟನೆ ಹೋರಾಟಗಳಿಗೆ ನಾಯಕತ್ವ ನೀಡಿದ್ದರು. ಇವರ ನಿಧನಕ್ಕೆ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರಿ, ಉಳ್ಳಾಲ ವಲಯ ಸಮಿತಿ ಕಾರ್ಯದರ್ಶಿ ಕೃಷ್ಣಪ್ಪ ಸಾಲ್ಯಾನ್, ಜನವಾದಿ ಮಹಿಳಾ ಸಂಘಟನೆ ಸದಸ್ಯೆ ಪದ್ಮಾವತಿ.ಯಸ್.ಶೆಟ್ಟಿ, ಡಿವೈಎಫ್ ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಸಿಪಿಎಂ ನಾಯಕ ಸುನಿಲ್ ಕುಮಾರ್ ಬಜಾಲ್ ಸಂತಾಪ ಸೂಚಿಸಿದ್ದಾರೆ.
ಮೃತರು ತಂದೆ, ತಾಯಿ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.


