ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ನರಿಂಗಾನ: ಉಚಿತ ವಸತಿಯೊಂದಿಗೆ ಉಚಿತ ಶಿಕ್ಷಣ, ಧಾರ್ಮಿಕ ಕಾರ್ಯದ ಮೂಲಕ ಮಕ್ಕಳಲ್ಲಿ ಜಾತ್ಯಾತೀತ ಮನೋಭಾವನೆ ಬೆಳೆಸುವ ಕಾರ್ಯ ಮಾಡುತ್ತಿರುವ ಅಲ್‍ಮದೀನಾದ ಕಾರ್ಯ ಶ್ಲಾಘನೀಯವಾಗಿದ್ದು, ಶಿಕ್ಷಣದಿಂದ ವಂಚಿತರಾದ ಅನಾಥರಿಗೆ ಶಿಕ್ಷಣ ನೀಡುವ ಕಾರ್ಯವನ್ನು ಮಾಡುವ ಈ ಸಂಸ್ಥೆಗೆ ಸರಕಾರ ಆರ್ಥಿಕವಾಗಿ ಬೆಂಬಲ ನೀಡಲು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು.
ಅವರು ಮಂಜನಾಡಿ ನರಿಂಗಾನದ ಅಲ್ ಮದೀನ ಇಸ್ಲಾಮಿಕ್ ಕಾಂಪ್ಲೆಕ್ಸ್ ನ ನೂತನ ಅನಾಥಾಲಯದ ಕಟ್ಟಡದ ಶಂಕುಸ್ಥಾಪನೆ ಮಾಡಿ ಮಾತನಾಡಿದರು.
ಪ್ರತಿಯೊಂದು ಧರ್ಮದ ಮೂಲ ಕರ್ತವ್ಯ ಮನಷ್ಯ ಕಲ್ಯಾಣವಾಗಿದ್ದು, ಮಕ್ಕಳಿಗೆ ಧರ್ಮವನ್ನು ಸರಿಯಾದ ರೀತಿಯಲ್ಲಿ ಕಲಿಸುವ ಕಾರ್ಯ ಮಾಡಬೇಕು ಎಂದ ಅವರು ಸರಕಾರ ಎಲ್ಲಾ ಧರ್ಮದವರಿಗೆ ಸಮಾನ ಅವಕಾಶವನ್ನು ಕೊಡುವ ಜವಾಬ್ದಾರಿಯುತ ಕಾರ್ಯವನ್ನು ಮಾಡುತ್ತಿದ್ದು, . ಸಾಮಾಜಿಕ ತಳಹದಿಯ ಕಾರ್ಯಕ್ಕೆ ಸರಕಾರದ ಬೆಂಬಲವಿದೆ ಎಂದರು.
ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಉಪಾಧ್ಯಕ್ಷ ಶೈಖುನಾ ತಾಜುಶ್ಶರೀಅಃ ಅಲಿಕುಂಇï ಮುಸ್ಲಿಯಾರ್ ಪ್ರಾರ್ಥನೆ ಮಾಡಿದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಮತ್ತು ಅರಣ್ಯ ಸಚಿವ ಬಿ. ರಮಾನಾಥ ರೈ, ಆರೋಗ್ಯ ಸಚಿವ ಯು.ಟಿ. ಖಾದರ್, ಕ್ರೀಡೆ ಮತ್ತು ಮೀನುಗಾರಿಕಾ ಸಚಿವ ಅಭಯ ಚಂದ್ರ ಜೈನ್, ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆ, ಯೋಜನಾ ಆಯೋಗ ಉಪಾಧ್ಯಕ್ಷ ಸಿ.ಎಂ. ಇಬ್ರಾಹಿಂ, ಅಲ್ಪಸಂಖ್ಯಾತ ಸಚಿವ ಖಮರುಲ್ ಇಸ್ಲಾಂ, ಮಂಗಳೂರು ದಕ್ಷಿಣ ಶಾಸಕ ಜೆ.ಆರ್. ಲೋಬೋ, ಮಂಗಳೂರು ಉತ್ತರ ಶಾಸಕ ಮೊೈದಿನ್ ಬಾವ, ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ, ಮಂಗಳೂರು ನಗರಾಭಿವೃದ್ಧಿ ಪ್ರಾ„ಕಾರ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ಕಣಚೂರು ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಗೂ ಕಾಂಗ್ರೆಸ್ ರಾಜ್ಯ ಅಲ್ಪ ಸಂಖ್ಯಾತ ವಿಭಾಗದ ಉಪಾಧ್ಯಕ್ಷ ಕಣಚೂರು ಮೋನು, ದ.ಕ ವಕ್ಪ್ ಮಂಡಳಿ ಅಧ್ಯಕ್ಷ ಎಸ್.ಎಮ್. ರಶೀದ್, ದ.ಕ. ಜಿಲ್ಲಾ ಪಂಚಾಯತ್ ಸದಸ್ಯರುಗಳಾದ ಎನ್.ಎಸ್. ಕರೀಂ, ಸಂತೋಷ್ ಕುಮಾರ್ ರೈ ಬೋಳಿಯಾರ್, ಅಖಿಲ ಭಾರತ ಕೃಷಿಕ ಸಮಾಜ ಅಧ್ಯಕ್ಷ ಹೈದರ್ ಪರ್ತಿಪ್ಪಾಡಿ, ನರಿಂಗಾನ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶೇಕಬ್ಬ ಬರೆಬಾಯಿ, ಮಂಜನಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಕುಂಇï ಬಾವ ಕಲ್ಕಟ್ಟ , ನಿವೃತ್ತ ಪೊಲೀಸ್ ಅಧಿಕಾರಿ ಜಿ.ಎ.ಬಾವ, ಉಪಸ್ಥಿತರಿದ್ದರು.
ಕೆ.ಎಂ.ಕೆ.ಮಂಜನಾಡಿ ಕಾರ್ಯಕ್ರಮ ನಿರ್ವಹಿಸಿದರು.