UN NETWORKS
ಉಳ್ಳಾಲ: ನಿಟ್ಟೆ ಉಷಾ ನರ್ಸಿಂಗ್ ಕಾಲೇಜಿನ ಮಕ್ಕಳ ಶುಶ್ರೂಷಾ ವಿಭಾಗದ ವತಿಯಿಂದ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ಡಾ| ಅಂಬೇಡ್ಕರ್ ಸಭಾಭವನದಲ್ಲಿ ನಡೆಯಿತು.
ಬಾಳೆಪುಣಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಲೀಲಾವತಿ ಉಪಸ್ಥಿತರಿದ್ದರು. ಅಂಗನವಾಡಿ ಮೇಲ್ವಿಚಾರಕ ಸವಿತ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನರ್ಸಿಂಗ್ ಕಾಲೇಜಿನ ಜೀವಿತಾ ಆಳ್ವ ಸ್ತನ್ಯಪಾನ ವಾರದ ಪ್ರಾಮುಖ್ಯತೆಯನ್ನು ವಿವರಿಸಿದರು. ಹರ್ಷ ಥೋಮಸ್ ಮತ್ತು ಶಂಸೀನ ಉಪಸ್ಥಿತರಿದ್ದರು.


