Site icon Ullalavani

ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾದ್ದರಿಂದ ಲಿಂಗತಾರತಮ್ಯಕ್ಕೆ ಕಾರಣ : ಸಿದ್ಧರಾಮಯ್ಯ

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ತೊಕ್ಕೊಟ್ಟು: ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಿರವುದೇ ಲಿಂಗತಾರತಮ್ಯಕ್ಕೆ ಕಾರಣವಾಗಿದ್ದು, ಈ ನಿಟ್ಟಿನಲ್ಲಿ ಹಿರಾದಂತಹ ಶಿಕ್ಷಣ ಸಂಸ್ಥೆಗಳು ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡುವ ಕಾರ್ಯ ಶ್ಲಾಘನೀಯ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಹಿರಾ ಮಹಿಳಾ ಸಂಯುಕ್ತ ಪದವಿ ಪೂರ್ವ ಕಾಲೇಜು ಹಿರಾ ನಗರ ತೊಕ್ಕೊಟ್ಟು ಇದರ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶತಶತಮಾನಗಳಿಂದ ಹಿಂದೂ ಮತ್ತು ಇಸ್ಲಾಂ ಧರ್ಮದ ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಸಮಾಜದಲ್ಲಿ ಹೆಣ್ಣು ಮಕ್ಕಳು ಶಿಕ್ಷಿತರಾಗಿ ಆರ್ಥಿಕ ಸಬಲರಾದರೆ ಮಾತ್ರ ಸಮಾಜದ ಸರ್ವಾಂಗೀನ ಅಭಿವೃದ್ಧಿ ಸಾಧ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನವದೆಹಲಿ ಜಮಾಅತೆ ಇಸ್ಲಾಮಿ ಹಿಂದ್ ಕಾರ್ಯದರ್ಶಿ ಏಜಾಝ್ ಅಹ್ಮದ್ ಅಸ್ಲಮ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್, ಕ್ರೀಡಾ ಮತ್ತು ಮೀನುಗಾರಿಕಾ ಸಚಿವ ಅಭಯಚಂದ್ರ ಜೈನ್, ನಗರಾಭಿವೃದ್ದಿ ಸಚಿವ ವಿನಯ ಕುಮಾರ್ ಸೊರಕೆ, ಮಂಗಳೂರು ಉತ್ತರ ಶಾಸಕ ಮೊೈದಿನ್ ಬಾವ, ದಕ್ಷಿಣ ವಿಧಾನ ಸಭಾ ಕ್ಷೇತ್ರ ಶಾಸಕ ಜೆ. ಆರ್. ಲೋಬೋ, ಮಾಜಿ ಸಚಿವ ಬಿ.ಎ. ಮೊೈದಿನ್, ಮಂಗಳೂರು ನಗರಾಭಿವೃದ್ಧಿ ಪ್ರಾ„ಕಾರದ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ಉಳ್ಳಾಲ ನಗರಸಭೆ ಅಧ್ಯಕ್ಷೆ ಗಿರಿಜಾ ಬಾೈ, ಕೌನ್ಸಿಲರ್ ಉಸ್ಮಾನ್ ಕಲ್ಲಾಪು, ಡಬ್ಲ್ಯು.ಪಿ.ಐ ಕರ್ನಾಟಕದ ರಾಜ್ಯಾಧ್ಯಕ್ಷ ಅಕ್ಬರ್ ಅಲಿ, ಮಂಗಳೂರು ಎಮ್.ಇ.ಐ.ಎಫ್. ಅಧ್ಯಕ್ಷ ಮೊಹಮ್ಮದ್ ಬ್ಯಾರಿ, ಶ್ರೀ ಚೀರುಂಭ ಭಗವತೀ ಕ್ಷೇತ್ರ ಅಧ್ಯಕ್ಷ ಚಂದ್ರಹಾಸ್ ಉಳ್ಳಾಲ್, ಹಿರಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಬ್ದುಹ್ಮಾನ್, ಉಪಾಧ್ಯಕ್ಷ ಕೆ.ಎಂ. ಶರೀಫ್ ಉಪಸ್ಥಿತರಿದ್ದರು.

ರಹ್ಮಾತುಲ್ ಸ್ವಾಗತಿಸಿದರು. ಮಂಜುಳಾ ಕಾರ್ಯಕ್ರಮ ನಿರ್ವಹಿಸಿದರು.

ಕಾರ್ಯಕ್ರಮದ ಬಳಿಕ ನಡೆದ ವಿಚಾರಗೋಷ್ಠಿಯಲ್ಲಿ ಆಧುನಿಕ ಶಿಕ್ಷಣ ಮತ್ತು ಮಾನವೀಯ ಮೌಲ್ಯಗಳು ಎಂಬ ವಿಷಯದ ಬಗ್ಗೆ ಮುಖ್ಯ ಭಾಷಣಕಾರರಾಗಿ ಮಂಗಳೂರು ವಿಶ್ವ ವಿದ್ಯಾಲಯ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಸೂರ್ಯನಾರಾಯಣ ಮಲ್ಲಿಪಟ್ಣ, ಯುನಿಟಿ ಕೇರ್ ಮತ್ತು ಹೆಲ್ತ್ ಸರ್ವಿಸಸ್ ಪ್ರೈ.ಲಿ. ಚೇರ್‍ಮೇನ್ ಡಾ. ಸಿ.ಪಿ. ಹಬೀಬ್ ರಹ್ಮಾನ್, ಮೂಡಬಿದರೆ ಲೇಖಕ ಅರವಿಂದ ಚೊಕ್ಕಾಡಿ ಉಪಸ್ಥಿತರಿದ್ದರು.
ಮಹಿಳಾ ವಿ.ವಿ. ರಾಜ್ಯಕ್ಕೆ ವಿಸ್ತರಣೆ:

ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ನೀಡುವ ನಿಟ್ಟಿನಲ್ಲಿ ಹಿಂದಿನ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಮಹಿಳಾ ವಿಶ್ವವಿದ್ಯಾಲಯವನ್ನು ಸ್ಥಾಪಿಸಿದ್ದರು. ಈ ವಿ.ವಿ. ಕೇವಲ ಬಿಜಾಪುರಕ್ಕೆ ಸೀಮಿತವಾಗದೆ ಮುಂದಿನ ದಿನಗಳಲ್ಲಿ ಇಡೀ ರಾಜ್ಯಕ್ಕೆ ವಿಸ್ತರಿಸಲಾಗುವುದು
ಸಿದ್ಧರಾಮಯ್ಯ ಮುಖ್ಯ ಮಂತ್ರಿ

Exit mobile version