Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಅಪರಾಧ ಸುದ್ದಿಗಳು

ಕೊಣಾಜೆ : ಮಂಗಳೂರು ವಿವಿ ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ

UllalaVaniBy UllalaVaniAugust 31, 2018No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಕೊಣಾಜೆ : ಮಂಗಳೂರು ವಿಶ್ವವಿದ್ಯಾನಿಲಯ ಕ್ಯಾಂಪಸ್ ಸಮೀಪ ನಡೆದುಕೊಂಡು ಹೋಗುತ್ತಿದ್ದ ನಾಲ್ವರು ವಿದ್ಯಾರ್ಥಿನಿಯರೆದುರು ಅಪರಿಚಿತನೋರ್ವ ದುರ್ವರ್ತನೆ ತೋರಿದ ಘಟನೆ ಬುಧವಾರ ಸಂಜೆ ವೇಳೆ ನಡೆದಿದ್ದು, ಘಟನೆ ಖಂಡಿಸಿ ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳದ ವಿ.ವಿ ಆಡಳಿತ ವಿರುದ್ಧ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆವರೆಗೂ ಮಂಗಳೂರು ವಿಶ್ವವಿದ್ಯಾನಿಲಯದ ಆಡಳಿತ ಸೌಧದ ಎದುರು ಪ್ರತಿಭಟನೆ ನಡೆಸಿದ ಘಟನೆ ಗುರುವಾರ ನಡೆದಿದೆ.

ಬುಧವಾರ ಸಂಜೆ ವಿದ್ಯಾರ್ಥಿನಿಯರು ತರಗತಿ ಮುಗಿಸಿ ಹಾಸ್ಟೆಲ್ ಕಡೆಗೆ ನಡೆದುಕೊಂಡು ಹೋಗುವ ಸಂದರ್ಭ ಕನ್ನಡ ವಿಭಾಗದ ಎದುರು ಕಿರಿದಾದ ಕಾಡಿನಲ್ಲಿ ಅಪರಿಚಿತನೋರ್ವ ನಿಂತಿದ್ದನು. ಕೆಂಪು ಬಣ್ಣದ ಗ್ಲ್ಯಾಮರ್ ಬೈಕಿನಲ್ಲಿ ಬಂದಿದ್ದ ಈತ ಹಲವು ಸಮಯ ಅಲ್ಲೇ ನಿಂತಿದ್ದನು. ಅದೇ ದಾರಿಯಲ್ಲಿ ನಾಲ್ವರು ವಿದ್ಯಾರ್ಥಿನಿಯರು ದಾಟುತ್ತಿದ್ದಂತೆ ಪ್ಯಾಂಟಿನ ಝಿಪ್ ತೆಗೆದು ಅಶ್ಲೀಲವಾಗಿ ಸನ್ನೆ ಮಾಡಿದವ ಮತ್ತೆಯೂ ಅಲ್ಲೇ ನಿಂತಿದ್ದನು. ತದನಂತರ ವಿದ್ಯಾರ್ಥಿನಿಯರು ಸೆಕ್ಯುರಿಟಿ ಸಿಬ್ಬಂದಿ ದೂರು ನೀಡುತ್ತಿದ್ದಂತೆ, ಬೈಕ್ ಸಮೇತ ಅಲ್ಲಿಂದ ಪರಾರಿಯಾಗಿದ್ದಾನೆ. ಕೂಡಲೇ ವಿದ್ಯಾರ್ಥಿನಿಯರೆಲ್ಲರೂ ಸಹಿ ಹಾಕಿದ ದೂರಿನ ಪತ್ರವನ್ನು ವಿ.ವಿ ಕುಲಸಚಿವರಿಗೆ ಸಂಜೆಯೇ ನೀಡಿದ್ದಾರೆ. ಆದರೆ ಶುಕ್ರವಾರ ಬೆಳಗ್ಗಿನವರೆಗೂ ಕೊಣಾಜೆ ಪೊಲೀಸರ ಗಮನಕ್ಕೆ ಬಂದಿರಲಿಲ್ಲ. ಇದನ್ನು ಖಂಡಿಸಿ ವಿದ್ಯಾರ್ಥಿಗಳು ಆಡಳಿತ ಕಚೇರಿಯೆದುರು ಗುರುವಾರ ಬೆಳಗ್ಗಿನಿಂದಲೇ ಪ್ರತಿಭಟನೆ ಆರಂಭಿಸಿದ್ದಾರೆ. ಉಪಕುಲಪತಿಗಳು ಸ್ಥಳಕ್ಕೆ ಬರುವವರೆಗೂ ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದ ವಿದ್ಯಾರ್ಥಿಗಳು ಮಧ್ಯಾಹ್ನ 1.30 ವರೆಗೆ ಉಪಕುಲಪತಿಗಳು ಸ್ಥಳಕ್ಕಾಗಮಿಸಿದ ಬಳಿಕ ಪ್ರತಿಭಟನೆಯನ್ನು ನಿಲ್ಲಿಸಿದ್ದಾರೆ.

ಸಿ.ಸಿ ಟಿವಿಯಲ್ಲಿ ಪರಿಶೀಲಿಸಿ : ಘಟನೆ ನಡೆದು ಹಲವು ಗಂಟೆಗಳಾದರೂ ಆಡಳಿತದ ಅಧಿಕಾರಿಗಳು ಸಿಸಿಟಿವಿಯನ್ನು ಪರಿಶೀಲಿಸಿಲ್ಲ. ಬೆಳಿಗ್ಗೆ ವಿದ್ಯಾರ್ಥಿನಿಯರನ್ನು ಕರೆದು ತೋರಿಸಿದ್ದಾರೆ. ಅದರಲ್ಲಿಯೂ ಸೂಕ್ತ ದಾಖಲೆಗಳಿರಲಿಲ್ಲ. ಈ ನಡುವೆ ಯುಪಿಎಸ್ ಸರಿಯಿಲ್ಲದೆ ಸಿಸಿಟಿವಿಗಳು ಕಾರ್ಯನಿರ್ವಹಿಸುತ್ತಿರಲಿಲ್ಲ ಅನ್ನುವ ಮಾತುಗಳನ್ನು ಹೇಳುತ್ತಿದ್ದಾರೆ. ಆ ಭಾಗದ ಸಿಸಿಟಿವಿ ಕಾರ್ಯಚರಿಸದೇ ಇದ್ದರೂ, ಇತರೆ ಭಾಗದಲ್ಲಿರುವ ಸಿಸಿಟಿವಿಯನ್ನು ಪರಿಶೀಲಿಸಿ ತಪ್ಪಿತಸ್ಥನ ವಿರುದ್ಧ ಕ್ರಮಕೈಗೊಳ್ಳಬಹುದಲ್ಲವೇ ಅನ್ನುವ ಆರೋಪಗಳು ವಿದ್ಯಾರ್ಥಿಗಳಿಂದ ಕೇಳಿಬಂತು.

ರೆಸ್ಟ್ ರೂಂ ಇಲ್ಲ : ವಿಶ್ವವಿದ್ಯಾನಿಲಯ ಕ್ಯಾಂಪಸ್ಸಿನೊಳಗೆ ವಿದ್ಯಾರ್ಥಿನಿಯರಿಗೆ ಸರಿಯಾದ ರೆಸ್ಟ್ ರೂಂ ಇಲ್ಲ. ವಸತಿ ನಿಲಯದಲ್ಲಿ ವಾಸಿಸುವ ವಿದ್ಯಾರ್ಥಿನಿಯರಿಗೆ ಸೂಕ್ತ ಆಂಬ್ಯುಲೆನ್ಸ್ ಅಥವಾ ವಾಹನದ ವ್ಯವಸ್ಥೆಯೂ ಇಲ್ಲ. ಇತ್ತೀಚೆಗೆ ತನ್ನ ಗೆಳತಿ ಅಸೌಖ್ಯಕ್ಕೆ ಒಳಪಟ್ಟಾಗ ವಾರ್ಡನ್ ಮೂಲಕ ತಿಳಿಸಲಾಯಿತಾದರೂ ಒಂದು ಗಂಟೆ ಬಳಿಕ ಬೇರೆ ವಾಹನ ಬಂದು ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ಸೇರಿಸುವಂತಾಗಿದೆ. ಗ್ರಂಥಾಲಯದಲ್ಲಿ ರಾತ್ರಿ 7.30ರ ವರೆಗೆ ಹೋಗಲು ಅನುಮತಿಯಿದೆ. ವಾಪಸ್ಸಾಗುವಾಗ ಹಲವೆಡೆ ದಾರಿದೀಪಗಳು ಇಲ್ಲ. ಇದರಿಂದ ವಿದ್ಯಾರ್ಥಿನಿಯರು ಸಂಚರಿಸುವುದು ಕಷ್ಟಕರವಾಗಿದೆ ಎಂದು ಆರೋಪಿಸಿದರು. ಪ್ರತಿಯೊಂದರಲ್ಲೂ ಶುಲ್ಕದ ಮೊತ್ತವನ್ನು ಹೆಚ್ಚು ಮಾಡಲಾಗಿದೆ. ಫಲಿತಾಂಶದಲ್ಲಿಯೂ ಗೊಂದಲವಿದೆ. ಹಲವು ವಿಭಾಗಗಳ ಫಲಿತಾಂಶ ಇನ್ನೂ ಪ್ರಕಟವಾಗಿಲ್ಲ ಎಂಬ ಆರೋಪಗಳು ವಿದ್ಯಾರ್ಥಿಗಳಿಂದ ಕೇಳಿಬಂತು.

ಉಪಕುಲಪತಿಗಳ ಭೇಟಿ : ಸರಕಾರಿ ಕಾರ್ಯಕ್ರಮದ ನಿಮಿತ್ತ ಉಡುಪಿ ಭೇಟಿ ನೀಡಿದ ಪ್ರಭಾರ ಉಪಕುಲಪತಿಗಳಾದ ಡಾ| ಕಿಶೋರ್ ಮಧ್ಯಾಹ್ನ ವೇಳೆ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಸಮಾಧಾನಿಸಿದರು. ದೂರು ನೀಡಿದ ಬೆನ್ನಲ್ಲೇ ಪ್ರಕರಣವನ್ನು ವಿ.ವಿ ಆಡಳಿತ ಗಂಭೀರವಾಗಿ ಪಡೆದುಕೊಂಡಿದೆ. ಸಿಸಿಟಿವಿ ದಾಖಲೆಗಳನ್ನು ಪಡೆದುಕೊಂಡಿದೆ. ಅದರಲ್ಲಿ ಪಡೆದ ಮಾಹಿತಿಯಂತೆ ಕೊಣಾಜೆ ಪೊಲೀಸ್ ಠಾಣೆಗೆ ದೂರು ನೀಡಲು ಎಲ್ಲಾ ಸಿದ್ಧತೆಗಳನ್ನು ನಡೆಸಲಾಗಿದೆ. ವಿದ್ಯಾರ್ಥಿನಿಯರು ಹೆಚ್ಚಾಗಿ ಅಡ್ಡ ರಸ್ತೆಯನ್ನು ಬಳಸದೆ ಮುಖ್ಯ ರಸ್ತೆಗಳಲ್ಲೇ ತೆರಳುವಂತೆ ಸೂಚಿಸಿದ್ದಾರೆ. ಕೆಲ ತಿಂಗಳುಗಳಿಂದ ಪ್ರಭಾರ ಉಪಕುಲಪತಿಗಳಾಗಿ ಕಾರ್ಯಾಚರಿಸುತ್ತಿರುವುದರಿಂದ ಆಯಾಯ ವಿಭಾಗಗಳಲ್ಲಿ ಇರುವ ಸಮಸ್ಯೆಗಳ ಪಟ್ಟಿಯನ್ನು ಆಡಳಿತ ಕಚೇರಿಯ ಗಮನಕ್ಕೆ ತಂದಲ್ಲಿ, ಸೂಕ್ತ ವ್ಯವಸ್ಥೆಗಳನ್ನು ಕೈಗೊಳ್ಳುವ ಭರವಸೆ ನೀಡಿದರು. ವಿದ್ಯಾರ್ಥಿನಿಯರ ಮೇಲೆ ಉಪನ್ಯಾಸಕರೋರ್ವರು ದೌರ್ಜನ್ಯ ಎಸಗಿದ ಪ್ರಕರಣ ದಾಖಲಾಗಿದ್ದರೂ, ಅವರನ್ನು ಅಮಾನತು ಮಾಡಲಾಗಿಲ್ಲ ಎಂಬ ವಿದ್ಯಾರ್ಥಿ ಪ್ರಶ್ನೆಗೆ ಪ್ರತಿಕ್ರಿಯಿಸಿದ ಉಪಕುಲಪತಿಗಳು ಪ್ರಕರಣ ನ್ಯಾಯಾಲಯದಲ್ಲಿದೆ. ಅದರ ಕುರಿತು ಯಾವುದೇ ಪ್ರತಿಕ್ರಿಯೆ ನೀಡಲು ಅಸಾಧ್ಯ ಎಂದರು.

ಸ್ಥಳಕ್ಕೆ ಆಗಮಿಸಿದ ಸಹಾಯಕ ಪೊಲೀಸ್ ಆಯುಕ್ತ ಎ.ರಾಮರಾವ್ ಅವರೂ ಸೂಕ್ತ ಮಾಹಿತಿ ಸಿಕ್ಕ ತಕ್ಷಣ ಆರೋಪಿಯನ್ನು ಬಂಧಿಸಲಾಗುವುದು. ಮುಂದೆ ವಿಶ್ವವಿದ್ಯಾನಿಲಯ ಕ್ಯಾಂಪಸ್ಸಿನಲ್ಲಿ ಇಂತಹ ಘಟನೆ ಮರುಕಳಿಸುವುದಿಲ್ಲ ಎಂಬ ಭರವಸೆ ನೀಡಿದರು. ಬಳಿಕ ವಿದ್ಯಾರ್ಥಿಗಳು ಮಧ್ಯಾಹ್ನವರೆಗೆ ನಡೆಸಿದ ಪ್ರತಿಭಟನೆಯನ್ನು ನಿಲ್ಲಿಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಉಳ್ಳಾಲ ಪೊಲೀಸರು…!

March 26, 2026

ತಲಪಾಡಿಯಲ್ಲಿ ಇ-ಸಿಗರೇಟ್ ಕೇಸ್: ಆರೋಪಿಯನ್ನು ಬಂಧಿಸಿದ ಪೊಲೀಸರು

March 26, 2026

ತೊಕ್ಕೊಟ್ಟು ಕಾಪಿಕಾಡು ಶ್ರೀ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಧೃಡ ಕಲಶಾಭಿಷೇಕ ಸಂಪನ್ನ

March 25, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ..!

By UllalaVaniMarch 26, 20260

ಮಂಗಳೂರು, ಮಾ. 26 : ನಗರದ ಪಾಲ್ದನೆ ಸಮೀಪದ ನೆಕ್ಕರೆ ಹಾಗೂ ಆಸುಪಾಸಿನಲ್ಲಿ ಕಳೆದ ಕೆಲವು ದಿನಗಳಿಂದ ಓಡಾಡುತ್ತಿದ್ದ ಬೃಹತ್ ಗಾತ್ರದ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

14 ವರ್ಷದ ಬಾಲಕಿಯರು ಉಚಿತ HPV ಲಸಿಕೆ ಹಾಕಿಸಿಕೊಳ್ಳಲು ಸಂಸದ ಕ್ಯಾ. ಚೌಟ ಕರೆ

March 26, 2026

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಉಳ್ಳಾಲ ಪೊಲೀಸರು…!

March 26, 2026

ಪಿಯುಸಿ ವಿದ್ಯಾರ್ಥಿ ಏಣಿ ಮೇಲಿಂದ ಬಿದ್ದು ಸಾವು..!!

March 26, 2026
1 2 3 … 1,847 Next
Automatic YouTube Gallery

ಬಾಳಿಕೆ-ಬೋಳ್ನಾಡುಗುತ್ತು ಕುಟುಂಬದ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ ಏ.5ರಿಂದ ಆರಂಭ

ಶ್ರೀ ಅರಸು ಮಂಜಿಷ್ಣಾರ್ ದೈವಗಳ ಪ್ರತಿಷ್ಠೆ, ಕಲಶಾಭಿಷೇಕಕ್ಕೆ ಭವ್ಯ ಸಿದ್ಧತೆ; ಏ.5ರಿಂದ 10ರವರೆಗೆ ಧಾರ್ಮಿಕ ವೈಭವ: ಬೋಳ್ನಾಡುಗುತ್ತು ಕ್ಷೇತ್ರದಲ್ಲಿ ಮಹೋತ್ಸವ

ಕ್ಷೇತ್ರದಲ್ಲಿ ಕುಟುಂಬಸ್ಥರಾದ ನಳಿನಾಕ್ಷ ಶೆಟ್ಟಿ ಮಾಹಿತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಬಾಳಿಕೆ-ಬೋಳ್ನಾಡುಗುತ್ತು ಕುಟುಂಬದ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ ಏ.5ರಿಂದ ಆರಂಭ
Now Playing
ಬಾಳಿಕೆ-ಬೋಳ್ನಾಡುಗುತ್ತು ಕುಟುಂಬದ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ ಏ.5ರಿಂದ ಆರಂಭ
ಶ್ರೀ ಅರಸು ಮಂಜಿಷ್ಣಾರ್ ದೈವಗಳ ಪ್ರತಿಷ್ಠೆ, ಕಲಶಾಭಿಷೇಕಕ್ಕೆ ಭವ್ಯ ಸಿದ್ಧತೆ; ...
ಶ್ರೀ ಅರಸು ಮಂಜಿಷ್ಣಾರ್ ದೈವಗಳ ಪ್ರತಿಷ್ಠೆ, ಕಲಶಾಭಿಷೇಕಕ್ಕೆ ಭವ್ಯ ಸಿದ್ಧತೆ; ಏ.5ರಿಂದ 10ರವರೆಗೆ ಧಾರ್ಮಿಕ ವೈಭವ: ಬೋಳ್ನಾಡುಗುತ್ತು ಕ್ಷೇತ್ರದಲ್ಲಿ ಮಹೋತ್ಸವ

ಕ್ಷೇತ್ರದಲ್ಲಿ ಕುಟುಂಬಸ್ಥರಾದ ನಳಿನಾಕ್ಷ ಶೆಟ್ಟಿ ಮಾಹಿತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೊಲ್ಯ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ದಿನಾಚರಣೆ – ಉಚಿತ ವೈದ್ಯಕೀಯ ಪರೀಕ್ಷೆ
Now Playing
ಕೊಲ್ಯ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ದಿನಾಚರಣೆ – ಉಚಿತ ವೈದ್ಯಕೀಯ ಪರೀಕ್ಷೆ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆಯ ...
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆಯ ನೇತೃತ್ವದಲ್ಲಿ;ಕೊಲ್ಯ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ದಿನಾಚರಣೆ

ಮಹಿಳಾ ದಿನಾಚರಣೆ ಹಿನ್ನಲೆ ಉಚಿತ ವ್ಯೆದ್ಯಕೀಯ ಪರೀಕ್ಷೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d