UN NETWORKS
ಇರಾ: ಇರಾ ಗ್ರಾಮ ಪಂಚಾಯಿತಿಯ ಮಹಾತ್ಮ ನರೇಗಾ ಯೋಜನೆಯ 2018-19ನೇ ಸಾಲಿನ ಪ್ರಥಮ ಹಂತದ ಸಾಮಾಜಿಕ ಪರಿಶೋಧನೆಯ ಗ್ರಾಮ ಸಭೆ ಮಂಗಳವಾರ ನಡೆಯಿತು.
ಇರಾ ಯುವಕ ಮಂಡಲದಲ್ಲಿ ನಡೆದ ನಡೆದ ಕಾರ್ಯಕ್ರಮದಲ್ಲಿ ಸಹಾಯಕ ನಿರ್ದೆಶಕ ಕೃಷಿ ಇಲಾಖೆ ನಾಯಾಯಣ ಶೆಟ್ಟಿ ನೋಡೆಲ್ ಅಧಿಕಾರಿಯಾಗಿ ಭಾಗವಹಿಸಿದ್ದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಪಂಚಾಯಿತಿ ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಳಿನಿ ಎ.ಕೆ., ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
ನರೇಗಾ ಯೋಜನೆಯ ತಾಲೂಕು ಸಂಯೋಜಕ ಪವಿತ್ರಾ ಶೆಟ್ಟಿ ಯೋಜನೆಯ ಬಗ್ಗೆ ವರದಿ ಹಾಗು ಮಾಹಿತಿ ನೀಡಿದರು. ಗ್ರಾಮ ಸಂಪನ್ಮೂಲ ವ್ಯಕ್ತಿ ಧರ್ಮಾವತಿ,ಸುಜಾತ, ಶ್ರುತಿ ಹಾಗೂ ಪ್ರವೀಣ್ ಉಪಸ್ಥಿತರಿದ್ದರು.




