UN NETWORKS
ಉಳ್ಳಾಲ: ಉಳ್ಳಾಲ ನಗರ ಸಭೆ ಚುನಾವಣೆಯಲ್ಲಿ ಎಸ್‍ಡಿಪಿಐನ 6 ಅಭ್ಯರ್ಥಿಗಳ ಜಯಗಳಿಸಿದ ಹಿನ್ನೆಲೆಯಲ್ಲಿ ಎಸ್‍ಡಿಪಿಐ ಮಂಜನಾಡಿ ವಲಯ ವತಿಯಿಂದ ಶಾಲಾ ಮಕ್ಕಳಿಗೆ ಅವಶ್ಯಕ ವಸ್ತುಗಳನ್ನು ವಿತರಿಸುವ ಮೂಲಕ ವಿಜಯೋತ್ಸವವನ್ನು ವಿಭಿನ್ನ ರೀತಿಯಲ್ಲಿ ಆಚರಿಸಲಾಯಿತು.
ಮಂಜನಾಡಿ ಗ್ರಾಮದ ಕಲ್ಕಟ್ಟ ಹಿರಿಯ ಪ್ರಾಥಮಿಕ ಶಾಲೆಯ “ನಲಿಕಲಿ” ವಿದ್ಯಾರ್ಥಿಗಳಿಗೆ ಅವಶ್ಯಕ 10 ಸಾವಿರ ಮೊತ್ತದ ಪೀಠೋಪಕರಣಗಳನ್ನು ವಿತರಿಸಲಾಯಿತು. ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕಿ ಜೆಸಿಂತ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಬಿ ಮೊಹಮ್ಮದ್, ಸದಸ್ಯ ಕೆ.ಕೆ ಹಸೈನಾರ್, ಎಸ್ ಡಿಐ ಮುಖಂಡರಾದ ನೌಷಾದ್ ಕಲ್ಕಟ್ಟ, ಫಯಾಝ್ ಮಂಜನಾಡಿ, ಶಹೀದ್ ಕಲ್ಕಟ್ಟ ಉಪಸ್ಥಿತರಿದ್ದರು.


