UN NETWORKS
ಕೊಣಾಜೆ: ಶಿಕ್ಷಕರು ಕೇವಲ ಪಾಠದ ವಿಷಯಗಳನ್ನು ಮಾತ್ರ ಕಲಿಸದೇ ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ಹರಿಕಾರರು ಮಾನವೀಯ ಮೌಲ್ಯಗಳನ್ನು ಬೆಳೆಸಿ ತಾಯಿಯಾಗಿ, ತಂದೆಯಾಗಿ ಸಮಾಜಕ್ಕೆ ಉತ್ತಮ ನಾಗರಿಕರನ್ನು ನೀಡುವಂತಹ ವ್ಯಕ್ತಿಗಳು ಎಂದು ಜಸ್ಟೀಸ್ ಕೆ.ಎಸ್.ಹೆಗಡೆ ಆಡಳಿತ ಸಂಸ್ಥೆಯ ಸಂಖ್ಯಾಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ| ಟಿ.ಪಿ.ಎಮ್ ಪಕ್ಕಳ ಅಭಿಪ್ರಾಯಪಟ್ಟರು.
ಅವರು ವಿಶ್ವಮಂಗಳ ವಿದ್ಯಾಸಂಸ್ಥೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಅಂಗವಾಗಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶಿಕ್ಷಕ ವೃಂದಕ್ಕೆ ಅಭಿನಂದನೆ ಸಲ್ಲಿಸಿದರು.
ವಿಶ್ವಮಂಗಳ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಪ್ರೊ| ಇಸ್ಮಾಯಿಲ್ ಬಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಇಂದಿನ ಮಕ್ಕಳೆ ಮುಂದಿನ ಪ್ರಜೆಗಳು ಶಿಕ್ಷಕರೇ ಮಕ್ಕಳ ಭವಿಷ್ಯ ರೂಪಿಸುವ ರೂವಾರಿಗಳು ಸಮಾಜದ ಮುನ್ನಡೆಗೆ ಕಾರಣೀಭೂತರಾದ ಮಕ್ಕಳ ಭವಿಷ್ಯ ರೂಪಿಸುತ್ತಿರುವ ಶಿಕ್ಷಕ ಬಂಧುಗಳಿಗೆ ವಂದನೆಯನ್ನು ಸಲ್ಲಿಸಬೇಕು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ವಿದ್ಯಾಸಂಸ್ಥೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತ ಮರೀಯಾ ಡಿ’ಸೋಜ ಮತ್ತು 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ವನಿತಾ ಸುರೇಶ್ ಕೊಟ್ಟಾರಿ ಇವರನ್ನು ಆಡಳಿತ ಮಂಡಳಿ ಹಾಗೂ ರಕ್ಷಕ -ಶಿಕ್ಷಕ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಪ್ರೌಢಶಾಲಾ ವಿದ್ಯಾರ್ಥಿನಿ ಸಿಂಚನಾ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಫಾತಿಮಾ ತಸ್ನೀಮ್ ಇವರು ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಶಂಕರಗೌಡ ಮತ್ತು ಉಪಾಧ್ಯಕ್ಷ ಯಮೂನಾ ಅಭಿನಂದನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಪೂರ್ವಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಅಂತು ಡಿ’ಸೋಜ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶೋಭಾವತಿ, ಪ್ರೌಢಶಾಲಾ ವಿಭಾಗದ ಪ್ರಿಯಾ, ಕಾಲೇಜು ವಿಭಾಗದ ಪ್ರಾಂಶುಪಾಲೆ ಪೂರ್ಣಿಮಾ ಹಾಗೂ ವಿಶ್ವಮಂಗಳ ವಿದ್ಯಾಸಂಸ್ಥೆಯ ಎಲ್ಲ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ಆಡಳಿತ ಮಂಡಳಿಯ ಕಾರ್ಯದರ್ಶಿ ಪ್ರೊ| ಭೋಜ ಪೂಜಾರಿ ಸ್ವಾಗತಿಸಿದರು. ಕೋಶಾಧಿಕಾರಿ ಡಾ| ಪರಮೇಶ್ವರ್ ವಂದಿಸಿದರು. ಆಡಳಿತ ಮಂಡಳಿಯ ಸದಸ್ಯೆ ಡಾ| ಎಚ್. ಎಲ್. ಶಶಿರೇಖಾ ಕಾರ್ಯಕ್ರಮ ನಿರೂಪಿಸಿದರು.


