UN NETWORKS
ಮಂಗಳೂರು: ಶಿಕ್ಷಕರಿಗೆ ಒತ್ತಡ ರಹಿತ ವಾತಾವಾರಣ ಕಲ್ಪಿಸಿದರೆ ಅವರಿಂದ ಗುಣಮಟ್ಟದ ಬೋಧನೆ ಸಾಧ್ಯ. ಈ ಬಗ್ಗೆ ಸರಕಾರ ಚಿಂತನೆ ನಡೆಸಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಎಲ್ ಅಭಿಪ್ರಾಯಪಟ್ಟರು.
ಶೈಕ್ಷಣಿಕ ಕ್ಷೇತ್ರಕ್ಕೆ ಸಂಬಂಧಿಸಿದ ಹೊಸ ನಿಯಮಗಳನ್ನು ಜಾರಿಗೆ ತರುವ ಮುನ್ನ ಆ ಕ್ಷೇತ್ರದ ನುರಿತರೊಂದಿಗೆ ಚರ್ಚೆ ನಡೆಸಿ ಮುಂದೆ ಹೆಜ್ಜೆ ಇಡಬೇಕಾಗಿದೆ. ಇದರಿಂದ ಶಿಕ್ಷಕರ ಸಮಸ್ಯೆಗಳು ಸರಕಾರದ ಗಮನಕ್ಕೆ ಬರುತ್ತದೆ. ಆದರೆ ಪ್ರಸ್ತುತ ಶಿಕ್ಷಕರ ಸಮಸ್ಯೆಗಳನ್ನು ಪರಿಗಣನೆಗೆ ತೆಗೆದುಕೊಳ್ಳದೆ ನೇರ ಸುತ್ತೋಲೆಗಳನ್ನು ಕಳುಹಿಸಿ ಶಿಕ್ಷಕರ ಮೇಲೆ ಹೆಚ್ಚಿನ ಹೊರೆ ಹಾಕಲಾಗುತ್ತಿದೆ ಎಂದು ತಿಳಿಸಿದರು.
ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಅವೈಜ್ಞಾನಿಕ ನಿಯಮಗಳಿಂದ ಶಿಕ್ಷಕರಿಗೆ ಮುಕ್ತವಾಗಿ ಕಾರ್ಯನಿರ್ವಹಿಸಲು ಕಷ್ಟವಾಗುತ್ತಿದೆ. ಪಿಂಚಣಿ ಸೇರಿದಂತೆ ಇನ್ನಿತರ ಹಲವು ಸಮಸ್ಯೆಗಳಿಂದ ಶಿಕ್ಷಕರು ಮುಕ್ತವಾಗಿ ಕೆಲಸ ಮಾಡಲು ಕಷ್ಟಪಡುತ್ತಿದ್ದಾರೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ತಿಳಿಸಿದರು.
ಮಿಲಾಗ್ರಿಸ್ ವಿದ್ಯಾಸಂಸ್ಥೆಗಳ ಸಂಚಾಲಕ ಫಾ.ವಲೇರಿಯನ್ ಡಿ ಸೋಜ ಮಾತನಾಡಿ, ದೇಶದ ಭವಿಷ್ಯ ಹಾಗೂ ಉತ್ತಮ ನಾಗರಿಕರನ್ನು ನಿರ್ಮಿಸುವ ಮಹತ್ತರ ಜವಾಬ್ದಾರಿ ಹೊತ್ತಿರುವ ಶಿಕ್ಷಕರ ಸಮಸ್ಯೆಗಳಿಗೆ ಪ್ರತಿಯೊಬ್ಬರು ಕಿವಿಯಾಗಬೇಕಾಗಿದೆ ಎಂದು ತಿಳಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಪ್ರೊ.ವೈ. ಶಿವರಾಮಯ್ಯ ಅಧ್ಯಕ್ಷತೆ ವಹಿಸಿದ್ದರು.
ಉಡುಪಿ ಟಿ.ಎಂ.ಪೈ ಬಿ.ಇಡಿ ಕಾಲೇಜಿನ ಸಮನ್ವಯಾ„ಕಾರಿ ಪ್ರೊ . ಮಹಾಬಲೇಶ್ವರ ರಾವ್ ದಿಕ್ಸೂಚಿ ಭಾಷಣ ಮಾಡಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪ್ರೊ.ನಾಗರಾಜಪ್ಪ ಎಂ., ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಬಿ.ಎ.ಖಾದರ್ ಶಾ, ಕರ್ನಾಟಕ ರಾಜ್ಯ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರೇಗೌಡ ಮೊದಲಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ನಿವೃತ್ತ ಮುಖ್ಯಸ್ಥರು, ಪಿಹೆಚ್‍ಡಿ ಮತ್ತು ಎಂಫಿಲ್ ವಿಜೇತರು, ರಾಜ್ಯ, ರಾಷ್ಟ್ರ ಪ್ರಶಸ್ತಿ ವಿಜೇತರು, ವಿಶೇಷ ಸಾಮಥ್ರ್ಯ, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಯಿತು.ಅಧ್ಯಕ್ಷ ಡಾ| ಇಸ್ಮಾಯಿಲ್ ಎನ್ ಸ್ವಾಗತಿಸಿದರು.