UN NETWORKS
ಬಡಕಬೈಲ್: ಕಾರಿಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಸಮೀಪದ ಪುಂಚಮೆಯಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.ಬಡಕಬೈಲ್ ನಿವಾಸಿ ಸೀತಾರಾಮ್ ಗಂಭೀರ ಗಾಯಗೊಂಡ ಬೈಕ್ ಸವಾರ ಎಂದು ಗುರುತಿಸಲಾಗಿದೆ.
ಕುಡಿದ ಮತ್ತಿನಲ್ಲಿದ್ದ ಸೀತಾರಾಮ್ ಅವರು ತನ್ನ ಬೈಕ್ ನಲ್ಲಿ ಬಡಕಬೈಲ್ ನಿಂದ ಪೊಳಲಿಗೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಎದುರಿನಲ್ಲಿ ಚಲಿಸುತ್ತಿದ್ದ ಜನಾರ್ದನ ಎಂಬವರ ರಿಡ್ಝ್ ಕಾರಿಗೆ ಢಿಕ್ಕಿ ಹೊಡೆದಿದ್ದು, ಪರಿಣಾಮ ಸೀತಾರಾಮ್ ಅವರ ಮುಖದ ಭಾಗಕ್ಕೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.
ಬಳಿಕ ಸ್ಥಳೀಯರು ಸೀತಾರಾಮ್ ಅವರಿಗೆ ಅಡ್ಡೂರಿನಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ನಗರದ ಎಸ್ ಸಿ ಎಸ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.ಘಟನೆಯಲ್ಲಿ ಕಾರಿನ ಹಿಂಬದಿ ಗಾಜು ಸಂಪೂರ್ಣ ಪುಡಿ ಪುಡಿಯಾಗಿದ್ದು, ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ.


