Site icon Ullalavani

ನಿಧನ : ದೇವದಾಸ ಶ್ರೀಯಾನ್

UN NETWORKS

ಉಳ್ಳಾಲ: ಕೋಟೆಕಾರು ಪಟ್ಟಣ ಪಂಚಾಯತ್‍ನ ಕಂದಾಯ ನಿರೀಕ್ಷಕ ಉಳ್ಳಾಲಬೈಲು ಬಂಗೇರ ಲೈನ್ ನಿವಾಸಿ ದೇವದಾಸ ಶ್ರೀಯಾನ್(59) ಹೃದಯಾಘಾತದಿಂದ ಸೆ. 30ರಂದು ರವಿವಾರ ನಿಧನ ಹೊಂದಿದರು.ಪತ್ನಿ ಮತ್ತು ಪುತ್ರನನ್ನು ಅಗಲಿದ್ದಾರೆ.

ಉಳ್ಳಾಲ ನಗರಸಭೆಯಲ್ಲಿ ಸುಮಾರು 25 ವರ್ಷಕ್ಕೂ ಅ„ಕ ಕಾಲ ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸಿ ಬಳಿಕ ಉಳ್ಳಾಲ ಪುರಸಭೆಯಲ್ಲಿ ಕಂದಾಯ ನಿರೀಕ್ಷಕರಾಗಿ ಪದೋನ್ನತಿ ಹೊಂದಿ ಕೋಟೆಕಾರು ಪಟ್ಟಣ ಪಂಚಾಯತ್‍ನಲ್ಲಿ ಕಳೆದ ಎರಡು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕವಾಗಿ ತೊಡಗಿಸಿಕೊಂಡಿದ್ದ ಅವರು ಶ್ರೀ ಜೈ ವೀರಮಾರುತಿ ವ್ಯಾಯಾಮ ಶಾಲೆಯ ಅಧ್ಯಕ್ಷರಾಗಿ ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ, ಪ್ರಸ್ತುತ ಶ್ರೀ ಜೈ ವೀರಮಾರುತಿ ವ್ಯಾಯಾಮ ಶಾಲೆ ಟ್ರಸ್ಟ್ ಇದರ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಶ್ರೀ ಜೈ ವೀರಮಾರುತಿ ವ್ಯಾಯಾಮ ಶಾಲೆಯ ಅಭಿವೃದ್ಧಿಗೆ ಕೊಡುಗೆ ನೀಡಿದ್ದರು.

ಸಚಿವ ಖಾದರ್ ಸಂತಾಪ : ದೇವದಾಸ್ ಶ್ರೀಯಾನ್ ನಿಧನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಸಂತಾಪ ಸೂಚಿಸಿದ್ದಾರೆ.

Exit mobile version