UN NETWORKS
ಅಸೈಗೋಳಿ: ಹಿಂದೂ ಸಂಘಟನೆ ಕಾರ್ಯಕರ್ತನೋರ್ವನಿಗೆ ಬಾರೊಳಗಡೆ ಕುಳಿತಿದ್ದ ಮೂವರು ಯುವಕರು ನಾಮ ಹಾಕುವ ವಿಚಾರಕ್ಕೆ ವಾಗ್ವಾದ ನಡೆದು ಕೀಯಿಂದ ಇರಿದು ಹಲ್ಲೆ ನಡೆಸಿರುವ ಘಟನೆ ಅಸೈಗೋಳಿ ವೈಭವ್ ಬಾರಿನಲ್ಲಿ ನಿನ್ನೆ ತಡರಾತ್ರಿ ವೇಳೆ ನಡೆದಿದ್ದು, ಘಟನೆಯಲ್ಲಿ ದಾಳಿ ನಡೆಸಿದ ಓರ್ವನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಕೊಣಾಜೆ ದಾಸರಮೂಲೆ ನಿವಾಸಿ ರಮೇಶ್ (26) ಟೈಲ್ಸ್ ಹಾಕುವ ಕಾಯಕವನ್ನು ಮಾಡುತ್ತಿದ್ದಾರೆ. ಹಿಂದೂಪರ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದರು. ಮದ್ಯದ ಅಮಲಿನಲ್ಲಿ ನಡೆದಿರುವ ಘಟನೆ ಇದಾಗಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆಸ್ಪತ್ರೆಗೆ ಪೊಲೀಸ್ ಕಮೀಷನರ್ ಟಿ.ಆರ್. ಸುರೇಶ್, ಡಿಸಿಪಿ ಉಮಾಪ್ರಶಾಂತ್, ಕೊಣಾಜೆ ಠಾಣಾಧಿಕಾರಿ ರವೀಶ್ ನಾಯ್ಕ್, ಉಳ್ಳಾಲ ಠಾಣಾಧಿಕಾರಿ ಗೋಪಿಕೃಷ್ಣ ಭೇಟಿ ನೀಡಿ ತನಿಖೆ ಕೈಗೆತ್ತಿಕೊಂಡಿದ್ದಾರೆ.