UN NETWORKS
ಉಳ್ಳಾಲ: ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಆರೋಗ್ಯ ಕ್ಷೇತ್ರದಲ್ಲಿನ ಅನುಪಮ ಸೇವೆಗಾಗಿ ರಾಜ್ಯ ಸರಕಾರ ಸಲ್ಲಿಸುತ್ತಿರುವ 2018ರ ಸಾಲಿನ ರಾಜ್ಯ ಪ್ರಶಸ್ತಿಯನ್ನು ದೇರಳಕಟ್ಟೆಯ ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸೋಮವಾರ ನೀಡಿದೆ.
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ, ಯೆನೆಪೋಯ ವೈದ್ಯಕೀಯ ಕಾಲೇಜಿನ ವೈದ್ಯಕೀಯ ವಿಭಾಗದ ಪ್ರಾಧ್ಯಪಕಿ ಹಾಗೂ ಮುಖ್ಯಸ್ಥೆ ಡಾ| ಪ್ರಭಾ ಅಧಿಕಾರಿ ಅವರಿಗೆ ಪ್ರಶಸ್ತಿ ಪ್ರಧಾನಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಜಯಮಾಲಾ, ಶಾಸಕ ಶರವಣ ಜತೆಗಿದ್ದರು.


