UN NETWORKS
ಉಳ್ಳಾಲ: ಗಾಂಧಿ ಜಯಂತಿ ಅಂಗವಾಗಿ ನಡೆದ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ 15 ದಿನಗಳ ಸ್ವಚ್ಛಭಾರತ್ ಕಾರ್ಯಕ್ರಮದ ಸಮಾರೋಪ ಸಮಾರಂಭ ಮಂಗಳವಾರ ಉಳ್ಳಾಲ ನಗರಸಭೆಯಲ್ಲಿ ನಡೆಯಿತು.
ಗಾಂಧಿ ಜಯಂತಿ ಪ್ರಯುಕ್ತ ನಡೆದ ಸ್ವಚ್ಚ ಭಾರತ್ ಕಾರ್ಯಕ್ರಮದ ಸಮಾರೋಪ ಸಮಾರಂಭವಿವಿಧ ಶಾಲಾ ಕಾಲೇಜುಗಳ ಮಕ್ಕಳಿಂದ ಜಾಥಾ, ವಿವಿಧ ಆಟೋಟ ಸ್ಪರ್ಧೆಗಳು, ಬೀದಿನಾಟಕ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಪರಿಸರವಾದಿ ಕೃಷ್ಣಪ್ಪ ಮಂಗಳೂರು ಇವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ನಗರಸಭಾ ಸದಸ್ಯರು, ವಿವಿಧ ಶಾಲೆಗಳ ಅದ್ಯಾಪಕರು, ವಿದ್ಯಾರ್ಥಿಗಳು, ಲಯನ್ಸ್ ಕ್ಲಬ್ ಕಾವೇರಿ ಇದರ ಸದಸ್ಯರು, ಉಳ್ಳಾಲ ನಗರಸಭಾ ಸಿಬ್ಬಂದಿ ಹಾಜರಿದ್ದರು.
ಕಾರ್ಯಕ್ರಮವನ್ನು ನಗರಸಭೆ ಸದಸ್ಯ ಇಸ್ಮಾಯಿಲ್ ನಿರೂಪಿಸಿದರು. ಪೌರಾಯುಕ್ತೆ ವಾಣಿ ವಿ ಆಳ್ವ ಸ್ವಾಗತಿಸಿದರು. ಕಿರಿಯ ಆರೋಗ್ಯ ನಿರೀಕ್ಷಕ ರಾಜೇಶ್ ವಂದಿಸಿದರು.


