ತೊಕ್ಕೊಟ್ಟು: ಬಿಜೆಪಿಯಿಂದ ಸಚಿವ ಖಾದರ್ ವಿರುದ್ಧ ಪ್ರತಿಭಟನೆ
UllalaVani
UN NETWORKS
ತೊಕ್ಕೊಟ್ಟು: ಸ್ಮಾರ್ಟ್ ಸಿಟಿ ಯೋಜನೆಯ ಅನುದಾನದಲ್ಲಿ ರೂ. 15 ಕೋಟಿಯನ್ನು ಕುದ್ರೋಳಿ ಕಸಾಯಿಖಾನೆಗೆ ಅನುದಾನ ಇಟ್ಟ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ವಿರುದ್ಧ ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ತೊಕ್ಕೊಟ್ಟು ಫ್ಲೈಓವರ್ ನಡಿ ಪ್ರತಿಭಟನೆ ನಡೆಯಿತು.
ಈ ವೇಳೆ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಛಾದ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ಪ ಪೂಜಾರಿ ಕಲ್ಲಡ್ಕ , ಜಿಲ್ಲಾ ಉಪಾಧ್ಯಕ್ಷ ರಾಮಚಂದ್ರ ಬೈಕಂಪಾಡಿ, ರಾಜ್ಯ ಕಾರ್ಯಕಾರಿಣಿ ಮಂಡಳಿ ಸದಸ್ಯ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ಸತೀಶ್ ಕುಂಪಲ, ಚಂದ್ರಶೇಖರ್ ಉಚ್ಚಿಲ್, ಜಿ.ಪಂ ಸದಸ್ಯೆ ಧನಲಕ್ಷ್ಮೀ ಗಟ್ಟಿ, ರಾಜೀವಿ ಕೆಂಪುಮಣ್ಣು, ಲಲಿತಾ ಸುಂದರ್, ಮೋಹನದಾಸ್ ಶೆಟ್ಟಿ ಕಿನ್ಯಾ, ಹರಿಯಪ್ಪ ಸಾಲ್ಯಾನ್, ಜಯಶ್ರೀ ಕರ್ಕೇರ, ಪ್ರಕಾಶ್ ಸಿಂಫೋನಿ, ತಾ.ಪಂ ಸದಸ್ಯ ರವಿಶಂಕರ್ ಸೋಮೇಶ್ವರ, ತಲಪಾಡಿ ಗ್ರಾ. ಪಂ ಅಧ್ಯಕ್ಷ ಸುರೇಶ್ ಆಳ್ವ, ಸೋಮೇಶ್ವರ ಗ್ರಾ.ಪಂ ಅಧ್ಯಕ್ಷ ರಾಜೇಶ್ ಉಚ್ಚಿಲ್, ಕೋಟೆಕಾರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ಸೊಳ್ಳೆಂಜೀರು, ಮುನ್ನೂರು ಗ್ರಾ.ಪಂ ಅಧ್ಯಕ್ಷೆ ರೂಪ ಶೆಟ್ಟಿ ಹೇಮಂತ್ ಶೆಟ್ಟಿ, ರಾಜೇಶ್ ಶೆಟ್ಟಿ ಪಜೀರುಗುತ್ತು ಉಪಸ್ಥಿತರಿದ್ದರು. ಮಂಗಳೂರು ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮೋಹನರಾಜ್ ಕೆ.ಆರ್ ಕಾರ್ಯಕ್ರಮ ನಿರೂಪಿಸಿದರು. ಮನೋಜ್ ಆಚಾರ್ಯ ವಂದಿಸಿದರು.