Site icon Ullalavani

ದೇರಳಕಟ್ಟೆ: SDPI ಕಾರ್ಯಕರ್ತರ ಸಮಾವೇಶ

UN NETWORKS

ದೇರಳಕಟ್ಟೆ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ವಿಧಾನ ಸಭಾ ಕ್ಷೇತ್ರ ಸಮಿತಿ ವತಿಯಿಂದ ಪಕ್ಷದ ಕಾರ್ಯಕರ್ತರ ಸಮಾವೇಶ ದೇರಳಕಟ್ಟೆ ಬಿ.ಸಿ.ಸಿ.ಹಾಲ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರ ಸಮಿತಿ ಅಧ್ಯಕ್ಷ ಅಬ್ಬಾಸ್ ಕಿನ್ಯ ವಹಿಸಿದ್ದರು. ಮುಖ್ಯ ಭಾಷಣಕಾರರಾಗಿ ಎಸ್.ಡಿ.ಪಿ.ಐ ರಾಜ್ಯ ಕಾರ್ಯದರ್ಶಿ ಅಕ್ರಂ ಹಸನ್ , ಎಸ್.ಡಿ.ಪಿ.ಐ ರಾಜ್ಯ ಸಮಿತಿ ಸದಸ್ಯರಾದ ಜಲೀಲ್ ಕೃಷ್ಣಾಪುರ , ಎಸ್.ಡಿ.ಪಿ.ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಹಮೀದ್ ಎಸ್.ಎಚ್. ಭಾಗವಹಿಸಿದ್ದರು. ಜಿಲ್ಲಾ ಸಮಿತಿ ಸದಸ್ಯರಾದ ಝಾಹಿದ್ ಮಲಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು . ಕ್ಷೇತ್ರ ಕಾರ್ಯದರ್ಶಿ ಅಬ್ದುಲ್ ಲತೀಫ್ ಕೋಡಿಜಾಲ್ ಸ್ವಾಗತಿಸಿದರು. ಇರ್ಷಾದ್ ಅಜಿನಡ್ಕ ಕಾರ್ಯಕ್ರಮ ನಿರೂಪಿಸಿದರು. ಝಹೂರ್ ತುಂಬೆ ವಂದಿಸಿದರು.

Exit mobile version