Site icon Ullalavani

ಕೊಣಾಜೆ ಪದವು ಶಾಲೆಯಲ್ಲಿ ವಿಶ್ವಾಸ ಕಿರಣ ಕಾರ್ಯಕ್ರಮ

UN NETWORKS

ಕೊಣಾಜೆ: ಕೊಣಾಜೆ ಪದವಿನ ಸರ್ಕಾರಿ ಪ್ರೌಢಶಾಲೆಯಲ್ಲಿ 2018-19ನೇ ಸಾಲಿನ ವಿಶ್ವಾಸ ಕಿರಣ ಕಾರ್ಯಕ್ರಮವು ಸೋಮವಾರ ನಡೆಯಿತು.

ತಾಲೂಕು ಪಂಚಾಯಿತಿ ಸದಸ್ಯರಾದ ಪದ್ಮಾವತಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಆತ್ಮವಿಶ್ವಾಸದ ಮೂಲಕ ಪರೀಕ್ಷೆಯನ್ನು ಬರೆಯುವಂತಾಗಬೇಕು. ಇದಕ್ಕೆ ಪೂರಕವಾಗಿ ಇಂತಹ ಕಾರ್ಯಕ್ರಮಗಳು ಬಹಳಷ್ಟು ಉಪಯೋಗಕಾರಿಯಾಗಿದೆ ಎಂದರು.ಉದ್ಯಮಿ ನಾಸೀರ್ ಕೆ. ಅವರು ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸುಗಳಿಸಬೇಕಾದರೆ ವಿದ್ಯಾರ್ಥಿ ಹಂತದಲ್ಲೇ ಶಿಕ್ಷಣದೊಂದಿಗೆ ಉತ್ತಮ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಅರಿವನ್ನು ಹೆಚ್ಚಿಸುವಲ್ಲಿ ಪರಿಣಾಮಕಾರಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕೊಣಾಜೆ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಅಚ್ಯುತಗಟ್ಟಿ, ಶಾಲಾ ಮುಖ್ಯೋಪಾಧ್ಯಾಯಿನಿ ಮೀನಾ ಗಾಂವ್ಕರ್, ಮಹಮ್ಮದ್ ಹನೀಫ್ ಹಾಗೂ ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

Exit mobile version