Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಗ್ರಾಮ

ಮದರಸ ಕಟ್ಟಡದಲ್ಲಿ ಸಿ.ಸಿ.ಟಿವಿ:ವಸತಿ ಪ್ರದೇಶದಲ್ಲಿ ಅಳವಡಿಕೆ ವಿರೋಧಿಸಿ ಪ್ರತಿಭಟನೆ

UllalaVaniBy UllalaVaniMay 1, 2015No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಕುತ್ತಾರು: ಮದರಸ ಕಟ್ಟಡದ ಹಿಂಭಾಗದ ವಸತಿ ಪ್ರದೇಶಕ್ಕೆ ಮುಖಮಾಡಿ ಸಿಸಿಟಿವಿ ಅಳವಡಿಸಿರುವುದರ ವಿರುದ್ಧ ಕೆರಳಿದ ಸ್ಥಳೀಯರು ಪ್ರತಿಭಟಿಸಿದ ಘಟನೆ ಕುತ್ತಾರು ಸಮೀಪದ ಸುಭಾಷನಗರದಲ್ಲಿ ಗುರುವಾರ ಸಂಜೆ ವೇಳೆ ನಡೆದಿದ್ದು, ಘಟನೆಯಿಂದ ಸ್ಥಳದಲ್ಲಿ ಉದ್ರಿಕ್ತ ವಾತಾವರಣ ನಿರ್ಮಾಣವಾಗಿದೆ.

ಸುಭಾಷನಗರ ವಸತಿ ಪ್ರದೇಶದಲ್ಲಿ ನಿರ್ಮಿಸಲಾದ ಅಂಜುಮನ್ ಮಬ್ಲಗುಲ್ ಫಲಾಹ್ ಮದ್ರಸದ ಕಟ್ಟಡಕ್ಕೆ ನಾಲ್ಕು ಸಿ.ಸಿ.ಟಿವಿಯನ್ನು ಗುರುವಾರ ಸಂಜೆ ವೇಳೆ ಅಳವಡಿಸಲಾಗಿದೆ. ಅದರಲ್ಲಿ ಎರಡು ಕಟ್ಟಡದ ಹಿಂಭಾಗವನ್ನು ಅವಲೋಕಿಸುವಂತೆ ಅಳವಡಿಸಲಾಗಿದೆ. ಈ ಪ್ರದೇಶದಲ್ಲಿ ಹಲವು ಮನೆಗಳು ಇದ್ದು, ಅವುಗಳ ಶೌಚಾಲಯಗಳಿರುವ ಪ್ರದೇಶ ಸಿಸಿಟಿವಿ ಸರಿಯಾಗಿ ಅವಲೋಕಿಸುವಂತೆ ಅಳವಡಿಸಲಾಗಿದೆ. ಮಹಿಳೆಯರು, ಯುವತಿಯರು ಇರುವ ಮನೆಯೊಳಗಿನ ಚಿತ್ರಣವನ್ನು ಸಿಸಿಟಿವಿ ಸೆರೆ ಮಾಡುತ್ತದೆ. ಇದರಿಂದ ಖಾಸಗೀತನಕ್ಕೆ ತೊಂದರೆ ಉಂಟಾಗುತ್ತದೆ ಎಂದು ಆರೋಪಿಸಿದ ಸ್ಥಳೀಯರು ಅದನ್ನು ಕೂಡಲೇ ತೆಗೆಯುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಸ್ಥಳದಲ್ಲಿ ಹಿಂದು ಮತ್ತು ಮುಸ್ಲಿಂ ಮನೆಗಳು ಇರುವುದರಿಂದ ಹೆಚ್ಚಿನ ಜನ ಜಮಾಯಿಸಿದ್ದರಿಂದಾಗಿ ಉದ್ವಿಘ್ನ ವಾತಾವರಣ ನಿರ್ಮಾಣವಾಯಿತು.

DSC_4584

DSC_4587

DSC_4591

DSC_4593

DSC_4595

 

DSC_4610

DSC_4612

DSC_4615

DSC_4619

DSC_4624

DSC_4598

DSC_4629

DSC_4636ಪೊಲೀಸ್ ಸಹಾಯಕ ಉಪನಿರೀಕ್ಷಕ ಕಲ್ಯಾಣಿ ಶೆಟ್ಟಿ, ಉಳ್ಳಾಲ ಠಾಣಾಧಿಕಾರಿ ಸವಿತೃ ತೇಜ ಮತ್ತು ಉಳ್ಳಾಲ ಎಸ್.ಐ ಭಾರತಿ ಸ್ಥಳದಲ್ಲಿ ಬೀಡು ಬಿಟ್ಟು ಪ್ರತಿಭಟನಾಕಾರರನ್ನು ಸಮಜಾಯಿಷಿ ನಡೆಸಿ, ಮದರಸದಲ್ಲಿ ಧರ್ಮಗುರುಗಳು ಇಲ್ಲದೇ ಇರುವುದರಿಂದ ಸದ್ಯ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಪೊಲೀಸರು ಹೇಳಿದಾಗ, ಸ್ಥಳೀಯರು ಪಟ್ಟು ಹಿಡಿದು ಇಂದೇ ತೆಗೆಯುವಂತೆ ಒತ್ತಾಯಿಸಿದರು. ಆದರೆ ಪೊಲೀಸರು ಸಿ.ಸಿಟಿವಿಯಲ್ಲಿ ಅಂತಹ ಯಾವುದೇ ದೃಶ್ಯಗಳು ಸೆರೆಯಾಗದಂತೆ ಅಳವಡಿಸಲಾಗಿದೆ. ಅದನ್ನು ಪರೀಕ್ಷಿಸಿದ್ದೇವೆ. ಮಹಿಳೆಯರು ಬಂದು ಮದರಸದೊಳಗೆ ಪರಿಶೀಲಿಸಬಹುದು ಎಂದರು. ಅದಕ್ಕೂ ಸ್ಥಳೀಯರು ಒಪ್ಪದೇ ಇದ್ದಾಗ ,ಯಾವುದೇ ಕನೆಕ್ಷನ್ ಕೊಡದಂತೆ ತಡೆಹಿಡಿದಿದ್ದೇವೆ. ಶುಕ್ರವಾರ ಬೆಳಿಗ್ಗೆ ಅದನ್ನು ತೆಗೆಯುವಂತೆ ಮದರಸ ಅಧಿಕೃತರಿಗೆ ಸೂಚಿಸುವ ಭರವಸೆಯನ್ನು ಉಳ್ಳಾಲ ಠಾಣಾಧಿಕಾರಿ ನೀಡಿದರು. ಸ್ಥಳದಲ್ಲಿ ಕೆಎಸ್ ಆರ್ ಪ ಪೊಲೀಸರು ಹಾಗೂ ಉಳ್ಳಾಲ ಪೊಲೀಸರು ಹೆಚ್ಚಿನ ಭದ್ರತೆ ಒದಗಿಸಿದ್ದಾರೆ.
ವಿವಾದಿತ ಮದರಸ: ವಸತಿ ಪ್ರದೇಶದಲ್ಲಿ ಮದರಸ ಕಟ್ಟಿ, ಬಳಿಕ ಮಸೀದಿ ಚಟುವಟಿಕೆ ಆರಂಭ ನಡೆಸಿದ ಹಿನ್ನೆಲೆಯಲ್ಲಿ ಸ್ಥಳೀಯರು ಪ್ರಥಮವಾಗಿ ಪ್ರತಿಭಟನೆ ನಡೆಸಿದ್ದರು. ಬಳಿಕ ಮಸೀದಿ ಚಟುವಟಿಕೆಯ ಮೈಕ್ ಅನ್ನು ಅಳವಡಿಸಿರುವುದನ್ನು ತೆಗೆಯುವ ಮೂಲಕ ವಿವಾದಕ್ಕೆ ತೆರೆ ಎಳೆದಿದ್ದರು. ಫೆ.15 ರಂದು ಮದರಸದಲ್ಲಿ ಧ್ವನಿವರ್ಧಕದಲ್ಲಿ ಬಾಂಗ್ ನೀಡುವ ವಿಚಾರವನ್ನು ಪ್ರಶ್ನಿಸಿದ ಮಹಿಳೆಯರಿಗೆ ತಂಡವೊಂದು ಹಲ್ಲೆ ನಡೆಸಿ ಮತ್ತೊಂದು ವಿವಾದ ಸೃಷ್ಟಿಯಾಗಿತ್ತು. ಅಲ್ಲದೇ ಇದೇ ಸಂದರ್ಭ ಮಹಿಳೆಗೆ ಹಲ್ಲೆ ನಡೆಸಿದವರಿಗೆ ಇನ್ನೊಂದು ತಂಡ ಹಲ್ಲೆ ನಡೆಸುವ ಮೂಲಕ ಉದ್ರಿಕ್ತ ಸ್ಥಿತಿ ನಿರ್ಮಾಣವಾಗಿತ್ತು. ಘಟನೆ ನಂತರ ಕೆಎಸ್ ಆರ್ ಪಿ ತುಕಡಿಯನ್ನು ಪ್ರದೇಶದಲ್ಲಿ ನಿಯೋಜಿಸಲಾಗಿತ್ತು. ಇದೀಗ ಸಿ.ಸಿ.ಟಿವಿ ಅಳವಡಿಕೆಯಿಂದ ಮತ್ತೊಂದು ವಿವಾದ ಸೃಷ್ಟಿಯಾಗಿದ್ದು, ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

ನ್ಯಾಯಾಲಯದಿಂದ ತಪ್ಪಿಸಿಕೊಂಡಿದ್ದ ಮುಕ್ಕಚ್ಚೇರಿ ನಿವಾಸಿ 14 ವರ್ಷಗಳ ಬಳಿಕ  ಸೆರೆ

February 4, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

By UllalaVaniFebruary 5, 20260

ಉಳ್ಳಾಲ: ಯೆನೆಪೋಯ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು, ಮಂಜನಾಡಿ ಇದರ ಆಶ್ರಯದಲ್ಲಿ ಹಾಗೂ ಭಾರತ ಸರ್ಕಾರದ ಆಯುಷ್…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

February 4, 2026

ಫೆ, 8.ಹಿದಾಯತ್ ನಗರ ಹುಸೈನಿಯಾ ದರ್ಸ್ ವಾರ್ಷಿಕ ಮಹ್ಳರತುಲ್ ಬದ್ರಿಯಾ

February 4, 2026
1 2 3 … 1,793 Next
Automatic YouTube Gallery

ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ

ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
Now Playing
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ...
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
Now Playing
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು ...
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು

ದೇವಳದ ಆಡಳಿತ ಮೋಕ್ತೆಸರರಾದ ಎ.ಜೆ.ಶೇಖರ್ ಹೇಳಿದ್ರೂ ಅಂದಿನ ಕಥನ

#ullalavani #news #tulunad #latestnews #ullala #kapikad #umamaheshwaridevi #history
Follow us on Facebook
Recent Editions
JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d