UN NETWORKS
ಉಳ್ಳಾಲ: ವಿದ್ಯಾರ್ಥಿನಿಯರು ಶೈಕ್ಷಣಿಕ ಜೀವನದೊಂದಿಗೆ ದೈಹಿಕ ಶಿಕ್ಷಣಕ್ಕೂ ಮಹತ್ವ ನೀಡಿದರೆ ಆರೋಗ್ಯಕರ ಜೀವನ ನಡೆಸಲು ಸಾಧ್ಯ ಎಂದು ಉಳ್ಳಾಲ ನಗರ ಸಭೆಯ ಕೌನ್ಸಿಲರ್ ಹಾಗೂ ಅಂತರಾಷ್ಟೀಯ ಮಟ್ಟದ ಕ್ರೀಡಾಪಟು ಗೀತಾ ಬಾಯಿ ಅಭಿಪ್ರಾಯಪಟ್ಟರು.
ಹಿರಾ ಮಹಿಳಾ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಬುಧವಾರ ನಡೆದ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಸಿದ್ದಿಕ್ ತಲಪಾಡಿ ಹೆಣ್ಣು ಮಕ್ಕಳು ಮನೆಗೆಲಸಕ್ಕೆ ಮಾತ್ರ ಸೀಮಿತವಾಗಿರದೆ ಕ್ರೀಡೆ ಹಾಗೂ ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆಗೈಯಬೇಕು ಎಂದು ವಿದ್ಯಾರ್ಥಿನಿಯರಿಗೆ ಹಿತೋಪದೇಶ ನೀಡಿದರು.ಶಾಂತಿ ಎಜುಕೇಶನಲ್ ಸಂಸ್ಥೆಯ ಕಾರ್ಯದರ್ಶಿ ಅಬ್ದುಲ್ ಕರೀಮ್‍ರವರ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಹಿರಾ ಸಂಸ್ಥೆಯ ಸಂಚಾಲಕ ರಹಮತುಲ್ಲಾ, ಶಾಂತಿ ಎಜುಕೇಶನಲ್ ಟ್ರಸ್ಟ್ ನ ಸದ್ಯಸರು, ಕಾಲೇಜಿನ ಪ್ರಾಂಶುಪಾಲೆ ವಿಜಯಲಕ್ಷ್ಮಿ ಉಪಸ್ಥಿತರಿದ್ದರು.ಕಾಲೇಜಿನ ಉಪನ್ಯಾಸಕಿ ಸೀಮಾ ಅಸ್ಸಾದಿ ಸ್ವಾಗತಿಸಿ, ಶೃತಿ ವಂದಿಸಿದರು. ಗುಲ್ನಾಝ್ ಕಾರ್ಯಕ್ರಮ ನಿರೂಪಿಸಿದರು.


