Site icon Ullalavani

ತೊಕ್ಕೊಟ್ಟಿನಲ್ಲಿ ನ3ರಂದು ಮರಳು ಸಮಸ್ಯೆ ವಿರುದ್ಧ ಪ್ರತಿಭಟನೆ

UN NETWORKS

ಉಳ್ಳಾಲ: ಕಳೆದ ಕೆಲವು ತಿಂಗಳಿಂದ ಮರಳು ಸಿಗದೆ ಹಲವಾರು ಕಾರ್ಮಿಕರು ಕೆಲಸ ಇಲ್ಲದೆ ಕುಟುಂಬ ಕಂಗಾಲಾಗಿದೆ. ಹಲವು ಧಾರ್ಮಿಕ ಕ್ಷೇತ್ರಗಳ ಕೆಲಸ ಸ್ಥಗಿತಗೊಂಡಿದೆ. ಇದರ ವಿರುದ್ಧ ಶನಿವಾರ ತೊಕ್ಕೊಟ್ಟು ಬಸ್ ನಿಲ್ದಾಣ ಬಳಿ ಸಾಂಕೇತಿಕ ಪ್ರತಿಭಟನೆ ನಡೆಸಲಾಗುತ್ತಿದ್ದು ಸಮಸ್ಯೆ ಪರಿಹಾರ ಆಗದಿದ್ದಲ್ಲಿ ಜಿಲ್ಲಾ ಮಟ್ಟದಲ್ಲಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಮಂಗಳೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ಹೇಳಿದರು.

ರಾಜ್ಯದಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಜಮೀನು ಕನ್ವರ್ಷನ್ ಆಗುತ್ತಿಲ್ಲ, ಇದರಿಂದಾಗಿ ಜನರು ಸಮಸ್ಯೆಗೆ ಸಿಲುಕಿದ್ದಾರೆ. ಹದಿನೈದು ದಿನದಲ್ಲಿ ಸಮಸ್ಯೆ ಪರಿಹರಿಸುವ ಬಗ್ಗೆ ಸಚಿವರು ಹೇಳಿದ್ದರೂ ಪ್ರಯೋಜನವಾಗಿಲ್ಲ. ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಬಂದಿದ್ದು ಸಾವಿರಾರು ಅರ್ಜಿಗಳು ಬಂದಿರುವುದರಿಂದ ಪರಿಹಾರ ನೀಡಲು ಹಣವಿಲ್ಲ ಎಂದು ಸರ್ಕಾರ ಹೇಳುತ್ತಿರುವುದು ಖೇದಕರ ಎಂದು ತೊಕ್ಕೊಟ್ಟುವಿನಲ್ಲಿರುವ ಕ್ಷೇತ್ರ ಬಿಜೆಪಿ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.

ಮುಖಂಡರಾದ ಸಂಜೀವ ಶೆಟ್ಟಿ ಅಂಬ್ಲಮೊಗರು, ಹರಿಯಪ್ಪ ಸಾಲ್ಯಾನ್, ಮೋಹನ್ ರಾಜ್, ಹೇಮಂತ್ ಶೆಟ್ಟಿ, ಸುರೇಂದ್ರ ಶೆಟ್ಟಿ ಉಪಸ್ಥಿತರಿದ್ದರು.

Exit mobile version