ಉಳ್ಳಾಲ್ ನ್ಯೂಸ್ ಡೆಸ್ಕ್
ಉಳ್ಳಾಲ : ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಇದರ ಮಹಾಸಭೆಯು ರವಿ ಸುವರ್ಣರವರ ಅಧ್ಯಕ್ಷತೆಯಲ್ಲಿ ಕ್ಲಿಕ್ ಮ್ಯಾರೇಜ್ ಹಾಲ್‌ನಲ್ಲಿ ನಡೆಯಿತು.
ನೂತನ ಅಧ್ಯಕ್ಷರಾಗಿ ರವಿ ಸುವರ್ಣ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಗೋಪಾಲ, ಕಾರ್ಯದರ್ಶಿಯಾಗಿ ಪುರುಷೋತ್ತಮ ಪಿ., ಜೊತೆ ಕಾರ್ಯದರ್ಶಿಯಾಗಿ ಸಿದ್ಧಿಕ್, ಕೋಶಾಧಿಕಾರಿಯಾಗಿ ಅಬ್ದುಲ್ ಪತಾಕ್, ಸಂಘಟನಾ ಕಾರ್ಯದರ್ಶಿಯಾಗಿ ನವೀನ್ ಉಚ್ಚಿಲ್ ಆಯ್ಕೆಯಾದರು.
ಈ ಸಂದರ್ಭ ಮುಖ್ಯ ಅತಿಥಿಗಳಾಗಿ ಜಿಲ್ಲಾಧ್ಯಕ್ಷ ಉರ್ಬನ್ ಪಿಂಟೋ, ಕಾರ್ಯದರ್ಶಿ ಚೇತನ್ ಮಲ್ಯ, ಕೋಶಾಧಿಕಾರಿ ಶೈಲೇಶ್ ಮಲ್ಯ, ಕಾರ್ಯಕಾರಿ ಸಮಿತಿ ಸದಸ್ಯ ದೇವಪ್ಪ ಕುಂಪಲ ಉಪಸ್ಥಿತರಿದ್ದರು.
ಬಾಲಕೃಷ್ಣ ಸರ್ಕಳ ಕಾರ್ಯಕ್ರಮ ನಿರೂಪಿಸಿದರು. ಅಬ್ದುಲ್ ಪತಾಕ್ ವಂದಿಸಿದರು.




