Site icon Ullalavani

ರಾಜ್ಯಮಟ್ಟದ ಫ್ಲೋರ್ಬಾಲ್ ಬಾಲಕಿಯರ ವಿಭಾಗದಲ್ಲಿ ದ.ಕ. ತಂಡ ಪ್ರಥಮ

UN NETWORKS

ತಲಪಾಡಿ: ತಲಪಾಡಿ ದೇವಿನಗರದ ಶಾರದಾ ವಿದ್ಯಾನಿಕೇತನ ಕ್ರೀಡಾಂಗಣದಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಫ್ಲೋರ್ಬಾಲ್ ಪಂದ್ಯಾಟದ ಬಾಲಕರ ವಿಭಾಗದಲ್ಲಿ ಬೆಂಗಳೂರು ಉತ್ತರ ಪ್ರಥಮ ಸ್ಥಾನ ಪಡೆದರೆ, ದಕ್ಷಿಣ ಕನ್ನಡ ದ್ವಿತೀಯ ಸ್ಥಾನ ಪಡೆಯಿತು. ಬಾಲಕಿಯರ ವಿಭಾಗದಲ್ಲಿ ದಕ್ಷಿಣ ಕನ್ನಡ ಪ್ರಥಮ ಸ್ಥಾನವನ್ನು ಪಡೆದರೆ, ಮೈಸೂರು ದ್ವಿತೀಯ ಸ್ಥಾನ ಪಡೆದುಕೊಂಡಿದೆ.

ಪದವಿ ಪೂರ್ವ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ, ಪದವಿಪೂರ್ವ ಶಿಕ್ಷಣ ಇಲಾಖೆ, ದ.ಕ.ಜಿಲ್ಲೆ ಶಾರದಾ ವಿದ್ಯಾನಿಕೇತನಪದವಿಪೂರ್ವ ಕಾಲೇಜು ತಲಪಾಡಿ ದೇವಿನಗರ, ಹಾಗೂ ದ.ಕ.ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರರ ಸಂಘ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ನಡೆದ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಶಾರದಾ ಸಂಸ್ಥೆಗಳ ಅಧ್ಯಕ್ಷ ಪ್ರೊ| ಎಂ.ಬಿ. ಪುರಾಣಿಕ್, ಶೈಕ್ಷಣಿಕ ಸಲಹೆಗಾರರಾದ ಲೀಲಾ ಉಪಾಧ್ಯಾಯ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ನಾಗರಾಜಪ್ಪ, ಪ್ರಾಂಶುಪಾಲರ ಸಂಘದ ಅಧ್ಯಕ್ಷ ಹಾಗು ಮಧುಸೂಧನ್ ಕುಶೆ, ಕಾಲೇಜಿನ ಪ್ರಾಂಶುಪಾಲ ಕೆ. ಕೆ. ಉಪಾಧ್ಯಾಯ, ಪ್ರಾಂಶುಪಾಲರ ಸಂಘದ ಖಜಾಂಜಿ ವಿಠಲ್ ಎ., ದೈಹಿಕ ಶಿಕ್ಷಣ ಇಲಾಖೆಯ ಜಿಲ್ಲಾ ಸಹ ನಿರ್ವಾಹಕ ಹಾಗೂ ರಾಜ್ಯ ಕಾರ್ಯದರ್ಶಿ ಪ್ರೇಮನಥ್ ಶೆಟ್ಟಿ, ದೈಹಿಕ ಶಿಕ್ಷಣ ನಿರ್ದೇಶಕ ನವೀನ್ ಜೈನ್ ಭಾಗವಹಿಸಿದ್ದರು.

ಶಾರದಾ ವಿದ್ಯಾನಿಕೇತನ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿನಾಯಕ್ ಬಿ.ಜಿ, ಶಾರದಾ ವಿದ್ಯಾನಿಕೇತನ ವಸತಿ ಶಾಲೆಯ ಪ್ರಾಂಶುಪಾಲೆ ಸುಷ್ಮಾ ದಿನಕರ್, ಶಾರದಾ ವಿದ್ಯಾನಿಕೇತನ ಡೇ ಬೋರ್ಡ್ ಶಾಲೆಯ ಪ್ರಾಂಶುಪಾಲೆ ಲತಾಂಜಲಿ ರೈ, ಉಪಪ್ರಾಂಶುಪಾಲ ಮೋಹನ್‍ದಾಸ್, ಆಡಳಿತಾಧಿಕಾರಿ ವಿವೇಕ್ ತಂತ್ರಿ ಉಪಸ್ಥಿತರಿದ್ದರು.

Exit mobile version