UN NETWORKS
ಇರಾ: ಇರಾ ಕುಂಡಾವು ಕಲ್ಲಾಡಿ ವಿಠಲ ಶೆಟ್ಟಿ ಸೇವಾ ಟ್ರಸ್ಟ್ ವತಿಯಿಂದ ಕಲ್ಲಾಡಿ ವಿಠಲ ಶೆಟ್ಟಿ ಸಂಸ್ಮರಣೆ ಹಾಗೂ ಯಕ್ಷಗಾನ, ಸನ್ಮಾನ ಕಾರ್ಯಕ್ರಮ ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬಯಲು ರಂಗಮಂದಿರದಲ್ಲಿ ಭಾನುವಾರ ನಡೆಯಿತು.
ಕಾರ್ಯಕ್ರಮದಲ್ಲಿ ನಿಟ್ಟೆ ಪರಿಗಣಿಸಲಾಗಿರುವ ವಿವಿ ಕುಲಪತಿ ಪ್ರೊ. ಡಾ. ಸತೀಶ್ ಕುಮಾರ್ ಭಂಡಾರಿ ಹಾಗೂ ಟ್ರಸ್ಟ್ ಪದಾಧಿಕಾರಿಗಳು ಹಿರಿಯ ಕಲಾವಿದ ಬಾಯಾರು ರಘುನಾಥ ಶೆಟ್ಟಿ, ಅವರನ್ನು ಸಹಾಯಧನ ವಿತರಿಸುವುದರೊಂದಿಗೆ ಸನ್ಮಾನಿಸಿದರು.ಟ್ರಸ್ಟ್ ಗೌರವಾಧ್ಯಕ್ಷ ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ, ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಸೇವಾ ಸಮಿತಿ ಅಧ್ಯಕ್ಷ ಡಿ. ಸುರೇಶ್ ರೈ, ಕಲಾಪೋಷಕ ಕುರಿಯಾಳಗುತ್ತು ರಘುನಾಥ ಪಯ್ಯಡೆ ಉಪಸ್ಥಿತರಿದ್ದರು.
ಟ್ರಸ್ಟ್ ಅಧ್ಯಕ್ಷ ಇರಾಗುತ್ತು ಜಗದೀಶ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪುಷ್ಪರಾಜ ಕುಕ್ಕಾಜೆ ಕಾರ್ಯಕ್ರಮ ನಿರೂಪಿಸಿದರು.
ಪತ್ರಕರ್ತ ಸುರೇಶ್ ಕೊಟ್ಟಾರಿ ಸನ್ಮಾನ ಪತ್ರ ವಾಚಿಸಿದರು. ಜಯರಾಮ ಪೂಜಾರಿ ವಂದಿಸಿದರು. ಬಳಿಕ ಬಡಗುತಿಟ್ಟಿನ ಖ್ಯಾತ ಕಲಾವಿದರ ಕೂಡುವಿಕೆಯಿಂದ ಮಾರುತಿ ಪ್ರತಾಪ ಯಕ್ಷಗಾನ ಬಯಲಾಟ ಪ್ರದರ್ಶನ ನಡೆಯಿತು.




