UN NETWORKS
ದೇರಳಕಟ್ಟೆ: ಮಕ್ಕಳ ಆರೋಗ್ಯದ ಕಾಳಜಿಯಲ್ಲಿ ಪೋಷಕರ ಪಾತ್ರ ಮಹತ್ವದ್ದಾಗಿದ್ದು, ಬಾಲ್ಯದಿಂದಲೇ ಮಕ್ಕಳಲ್ಲಿ ಆರೋಗ್ಯ ಮತ್ತು ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಿದಾಗ ಸಮಾಜಕ್ಕೆ ಆರೋಗ್ಯಯುತ ಯುವ ಪೀಳಿಗೆಯನ್ನು ಬೆಳೆಸಲು ಸಾಧ್ಯ ಎಂದು ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕ ಅಬ್ದುಲ್ ರಹೆಮಾನ್ ಅಭಿಪ್ರಾಯಪಟ್ಟರು.
ಕಣಚೂರು ಮೆಡಿಕಲ್ ಕಾಲೇಜಿನ ಡೀನ್ ಡಾ| ವಿರೂಪಾಕ್ಷ ಅಧ್ಯಕ್ಷತೆ ವಹಿಸಿದ್ದರು. ವೈದ್ಯಕೀಯ ಅಧೀಕ್ಷಕ ಡಾ| ದೇವಿ ಪ್ರಸಾದ್ ಶೆಟ್ಟಿ, ಮುಖ್ಯ ಆಡಳಿತ ಅಧಿಕಾರಿ ಡಾ| ರೋಹನ್ ಮೋನಿಸ್ , ಸಮುದಾಯ ಅರೋಗ್ಯ ವಿಭಾಗ ಮುಖ್ಯಸ್ಥ ಕರ್ನಲ್ ಡಾ| ಕಿರಣ್ ಕೆ.ಜಿ, ಮೆಡಿಸಿನ್ ವಿಭಾಗದ ಮುಖ್ಯಸ್ಥ ಡಾ| ಅಶೋಕ್ ನಾಯಕ್, ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಶಾಂತಿ ಲೋಬೋ ಉಪಸ್ಥಿತರಿದ್ದರು.
ನರ್ಸಿಂಗ್ ಕಾಲೇಜಿನ ಉಪನ್ಯಾಸಕಿ ಮಾಲತಿ ಕೆ.ಸ್ವಾಗತಿಸಿದರು.