UN NETWORKS
ಇರಾ: ಇರಾ ತಾಳಿತ್ತಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ ಉಪಸ್ಥಿತಿಯಲ್ಲಿ ಗುರುವಾರ ನಡೆಸಲಾಯಿತು. ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಚಂದ್ರಾವತಿ, ಗ್ರಾಮ ಪಂಚಾಯತ್ ಸದಸ್ಯರಾದ ದೇವದಾಸ ಅಡಪ, ರಮೇಶ್ ಪೂಜಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಳಿನಿ ಎ.ಕೆ, ಗಣ್ಯರಾದ ವಾಮನ ಪೂಜಾರಿ, ಅದ್ರಾಮ್ ಸಂಪಿಲ, ಕಿಶೋರ್, ರಾಮ್ ಇರಾ, ಮಕ್ಕಳ ಪೋಷಕರು, ಆಶಾ ಕಾರ್ಯಕರ್ತೆಯರು ಉಪಸ್ಥಿತಿತರಿದ್ದರು.