Site icon Ullalavani

ಯೇನೆಪೊಯ ನರ್ಸಿಂಗ್ ಕಾಲೇಜು ಅಶ್ರಯದಲ್ಲಿ ಮಕ್ಕಳ ದಿನಾಚರಣೆ

UN NETWORKS

ದೇರಳಕಟ್ಟೆ: ದೇರಳಕಟ್ಟೆಯ ನರ್ಸಿಂಗ್ ಕಾಲೇಜಿನ ಮಕ್ಕಳ ಶುಶ್ರುಷಾ ವಿಭಾಗದ ವತಿಯಿಂದ ಮಕ್ಕಳ ದಿನಾಚರಣೆ ದಿ ಮರ್ಸಿ ದೆ ಅನಾಥಾಶ್ರಮದಲ್ಲಿ ಆಚರಿಸಲಾಯಿತು.

ಯೇನೆಪೊಯ ನರ್ಸಿಂಗ್ ಕಾಲೇಜಿನ ಮೂರನೇ ವರ್ಷದ ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳು ಕಾರ್ಯಕ್ರಮ ನಡೆಸಿಕೊಟ್ಟರು.
ಆಶ್ರಮದ 121 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಕಾರ್ಯಕ್ರಮದ ಅಂಗವಾಗಿ ದಂತ ಶುಚಿತ್ವದ ಬಗ್ಗೆ ಆರೋಗ್ಯ ಶಿಕ್ಷಣವನ್ನು ನೀಡಲಾಯಿತು. ಮಕ್ಕಳ ಮನೋರಂಜನಾ ಅಂಗವಾಗಿ ನೃತ್ಯ ಪ್ರದರ್ಶನ ಹಾಗು ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು.

ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಕಾಲೇಜಿನ ವಿದ್ಯಾರ್ಥಿಗಳು ಮಕ್ಕಳಿಗೆ ದೈನಂದಿನ ಬಳಕೆಗೆ ಬೇಕಾದ ಸಾಮಗ್ರಿಗಳನ್ನು ಹಾಗೂ ತಿಂಡಿತಿನಿಸುಗಳನ್ನು ವಿತರಿಸಿದರು.

Exit mobile version