Site icon Ullalavani

ತೊಕ್ಕೊಟ್ಟು : ಏಜೆಂಟ್ ಕೆಲಸ ನಿರ್ವಹಿಸುವ ವಿದೇಶಮಂತ್ರಿ ಸುಷ್ಮಾ ಸ್ವರಾಜ್

ಉಳ್ಳಾಲ್ ನ್ಯೂಸ್ ಡೆಸ್ಕ್
ಉಳ್ಳಾಲ: ವಿದೇಶ ಮಂತ್ರಿ ಸುಷ್ಮಾ ಸ್ವರಾಜ್ ಅವರು ಪ್ರಧಾನಿ ಮೋದಿಯವರ ಏಜೆಂಟರಾಗಿ ಕಾರ‍್ಯ ನಿರ್ವಹಿಸುತ್ತಿದ್ದಾರೆ ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್ ಉಳ್ಳಾಲ್ ಲೇವಡಿಯಾಡಿದರು.

ಅವರು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಮತ್ತು ಮಂಗಳೂರು ವಿಧಾನಸಭಾ ಕ್ಷೇತ್ರದ ಯೂತ್ ಕಾಂಗ್ರೆಸ್ ವತಿಯಿಂದ ಕೇಂದ್ರ ಸರಕಾರದ ವಿರುದ್ಧ ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.
ಕೇಂದ್ರದ ಬಿಜೆಪಿ ಸರಕಾರವನ್ನು ಮೂರು ಸಚಿವರು ನಡೆಸುತ್ತಿದ್ದಾರೆ. ಮೋದಿ, ಅಮಿತ್ ಷಾ ಮತ್ತು ಅರುಣ್ ಜೇಟ್ಲಿ ಮಾತ್ರ. ಉಳಿದ ಸಚಿವರು ಮತ್ತು ಹಿರಿಯ ನಾಯಕರಾದ ಎಲ್.ಕೆ.ಆಡ್ವಾಣಿಯವರು ಎಲ್ಲಿದ್ದಾರೆ ಎಂಬುದು ನಿಗೂಢವಾಗಿದೆ. ಕಾಂಗ್ರೆಸ್ ನ ರಾಹುಲ್ ಗಾಂಧಿ ಅವರು ಎಲ್ಲಿದ್ದಾರೆ ಎಂದು ಪ್ರಶ್ನಿಸುವ ಮುನ್ನ ತಮ್ಮನ್ನು ಅರಿತುಕೊಳ್ಳಬೇಕಿದೆ. ಪಾರ್ಲಿಮೆಂಟಿನಲ್ಲಿ ಚರ್ಚೆಯನ್ನು ಎದುರಿಸಲಾಗದ ಪ್ರಧಾನಿಯವರು ವಿದೇಶ ಪ್ರವಾಸ ಕೈಗೊಂಡು ಕಾಲಹರಣ ಮಾಡುತ್ತಿದ್ದಾರೆ. ಅದಕ್ಕಾಗಿ ವಿದೇಶ ಮಂತ್ರಿ ಸುಷ್ಮಾ ಸ್ವರಾಜ್ ಅವರು ಮೋದಿ ಭೇಟಿಗೆ ಮುನ್ನ , ವಿದೇಶಕ್ಕೆ ತೆರಳಿ ಬರುವ ಸೂಚನೆಯನ್ನು ನೀಡಿ ಏಜಂಟರಾಗಿ ಕಾರ‍್ಯ ನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು ಎಂದ ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಇಳಿಕೆಯಾದರೂ , ಕೇಂದ್ರದ ಬಿಜೆಪಿ ಸರಕಾರ ಡೀಸೆಲ್, ಪೆಟ್ರೋಲ್ ದರದ ಬೆಲೆ ಏರಿಕೆಯನ್ನು ಮಾಡುವ ಮೂಲಕ ಜನರನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿದೆ. ತೈಲ ಬೆಲೆ ಇಳಿಕೆ ಮಾಡದೇ ಇದ್ದಲ್ಲಿ ಮುಂದೆ ತೀವ್ರ ತರದ ಹೋರಾಟ ಮುಂದುವರಿಸುತ್ತೇವೆ ಎಂದು ಎಚ್ಚರಿಕೆಯನ್ನು ನೀಡಿದರು.
ಈ ಸಂದರ್ಭ ಮಂಗಳೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ನಝರ್ ಷಾ ಪಟ್ಟೋರಿ ಮಾತನಾಡಿ ತೈಲ ಬೆಲೆ ಇಳಿಕೆ ಮಾಡದೇ ಇದ್ದಲ್ಲಿ, ಮುಂದೆ ರೈಲು ಮತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿ ಉಗ್ರ ಹೋರಾಟ ನಡೆಸುವುದಾಗಿ ಹೇಳಿದರು.
ಜಿಲ್ಲಾ ಪಂಚಾಯಿತಿ ಸದಸ್ಯ ಎನ್.ಎಸ್.ಕರೀಂ, ಉಳ್ಳಾಲ ನಗರಸಭೆ ಅಧ್ಯಕ್ಷೆ ರಝಿಯಾ ಇಬ್ರಾಹಿಂ ತಾ.ಪಂ ಸದಸ್ಯರುಗಳಾದ ಸುರೇಖಾ ಚಂದ್ರಹಾಸ್, ಮಹಮ್ಮದ್ ಮೋನು ನಕ್ಕರೆ ಬಾವಾ, ಕ್ಲೇರಾ ಕುವೆಲ್ಲೋ , ಜಿಲ್ಲಾ ಯುವಕಾಂಗ್ರೆಸ್ ಉಪಾಧ್ಯಕ್ಷ ಲುಕ್‌ಮಾನ್ ಬಂಟ್ವಾಳ, ಉಳ್ಳಾಲ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಮಹಮ್ಮದ್ ಮುಕ್ಕಚ್ಚೇರಿ, ಜಿಲ್ಲಾ ಕಾಂಗ್ರೆಸ್ ನ ವಕ್ತಾರ ಫಾರುಕ್ ಉಳ್ಳಾಲ್ ಮೊದಲಾದವರು ಉಪಸ್ಥಿತರಿದ್ದರು.

Exit mobile version