ಉಳ್ಳಾಲ್ ನ್ಯೂಸ್ ಡೆಸ್ಕ್
ಉಳ್ಳಾಲ : ಇಲ್ಲಿನ ಸೈಯ್ಯದ್ ಮದನಿ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿರುವ ಟಿಪ್ಪು ಸುಲ್ತಾನ್ ಕಾಲೇಜು ಇದರ ಆಶ್ರಯದಲ್ಲಿ ಮೇ.೧೩ರಂದು ಬೃಹತ್ ಉದ್ಯೋಗ ಮೇಳ ನಡೆಯಲಿದೆ.

೧೦ನೇ ತರಗತಿ ಮತ್ತು ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಬಹುದಾದ ಮೇಳದಲ್ಲಿ ಪ್ರಖ್ಯಾತ ೫೦ ಕಂಪೆನಿಗಳು ಭಾಗವಹಿಸಲಿದ್ದು, ಖಾಲಿ ಇರುವ ಸುಮಾರು ೧೦೦೦ ಉದ್ಯೋಗಗಳಿಗೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಕನಿಷ್ಟ ೫ ಸಿ.ವಿಯನ್ನು ಅಭ್ಯರ್ಥಿಗಳು ತರಬೇಕು. ಯಾವುದೇ ಪ್ರವೇಶ ಶುಲ್ಕ ಇರುವುದಿಲ್ಲ ಎಂದು ಕಾಲೇಜಿನ ಪ್ರಾಂಶುಪಾಲ ಡಿ.ಬಿ. ಮೊದಿನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


