UN NETWORKS
ಮೊಂಟೆಪದವು: ತಮ್ಮಲ್ಲಿರುವ ಪ್ರತಿಭೆಯನ್ನು ಪ್ರಕಟಿಸುವ ಶುಭ ದಿನವೇ ಪ್ರತಿಭಾ ಕಾರಂಜಿ. ಇದು ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಪ್ರಗತಿಗೆ ವೇದಿಕೆ ಪೂರಕ. ಮಕ್ಕಳ ಪ್ರತಿಭೆ ಅನಾವರಣಗೊಂಡಾಗ ಮಕ್ಕಳ ಪೋಷಕರ ಮನ ಪುಳಕಿತವಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಸದಸ್ಯೆ ಮಮತಾ ಡಿ. ಎಸ್ ಗಟ್ಟಿ ಹೇಳಿದರು.
ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮ ಪಂಚಾಯತಿಯ ನರಿಂಗಾನ ಸಂಯುಕ್ತ ಪದವಿಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಶುಕ್ರವಾರ ನಡೆದ ಪ್ರತಿಭಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯಾರ್ಥಿ ಜೀವನ ಅದು ಸುವರ್ಣಾಕ್ಷರದಲ್ಲಿ ಬರೆದಿಡುವಂತಹ ಸಂತಸ ಕೊಡುವ ದಿನಗಳು. ನಾವು ಶೈಕ್ಷಣಿಕವಾಗಿ ಹಾಗೂ ಪಠ್ಯೇತರ ಚಟುವಟಿಕೆಯಲ್ಲೂ ಉತ್ತಮ ಸಾಧನೆ ಮಾಡಬೇಕು. ಸರಕಾರ ಶಿಕ್ಷಣಕ್ಕಾಗಿ ಎಲ್ಲ ಸೌಲಭ್ಯ ಕೊಡುತ್ತಿದ್ದು ವಿದ್ಯಾರ್ಥಿಗಳು ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಹಾಗೆಯೇ ಶಾಲಾ ಅಭಇವೃದ್ಧೀ ಸಮಿತಿಯ ಬಹುಕಾಲದ ಬೇಡಿಕಯಾಗಿರುವ ಪ್ರಯಾಣಿಕರ ತಂಗುದಾಣ ನಿರ್ಮಾಣಕ್ಕೆ ಸ್ಥಳಾವಕಾಶ ದೊರೆತರೆ ಉತ್ತಮ ಪ್ರಯಾಣಿಕರ ತಂಗುದಾಣವನ್ನು ನಿರ್ಮಿಸಲು ಒಂದು ಲಕ್ಷ ರೂ. ಅನುದಾನ ಮೀಸಲಿಡುತ್ತೇನೆ ಎಂದು ತಿಳಿಸಿದರು.
ನರಿಂಗಾನ ಗ್ರಾಮ ಪಂಚಾಯಿತಿ ಅಧ್ಯಕ್ಷ ಇಸ್ಮಾಯಿಲ್ ಮೀನಂಕೋಡಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪ್ರಶಾಂತ್ ಕಾಜವ, ತಾಲೂಕು ಪಂಚಾಯಿತಿ ಸದಸ್ಯ ಹೈದರ್ ಕೈರಂಗಳ, ನ್ಯಾಯವಾದಿ ಶೈಲಾಜಾ ರಾಜೇಶ್, ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಧ್ಯಕ್ಷ ಅಬ್ದುಲ್ ಜಲೀಲ್ ಮೋಂಟುಗೋಳಿ, ಪ್ರೌಢ ಶಾಲೆಯ ಅಭೀವೃದ್ಧಿ ಸಮಿತಿ ಅಧ್ಯಕ್ಷ ಮುರಳೀಧರ ಶೆಟ್ಟಿ ಮೋರ್ಲ, ಸಮಿತಿ ಸದಸ್ಯರುಗಳಾದ ಗೋಪಾಲ ಭಟ್ ಎಡಂಬಲೆ, ಪದ್ಮನಾಭ ನರಿಂಗಾನ, ಬಿ. ನಾರಾಯಣ ಶೆಟ್ಟಿ ಶೆಟ್ಟಿ, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಅಬ್ದುರ್ರಹ್ಮಾನ್ ಚಂದಹಿತ್ಲು, ಫಯಾಝ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹನೀಫ್ ಚಂದಹಿತ್ಲು, ನವಾಝ್ ಕಲರಕೋಡಿ, ಕಾಲೇಜು ಅಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷ ರಾಮಣ್ಣ ಶೆಟ್ಟಿ ಹಾಗೂ ಬಾಳೆಪುಣಿ ಗ್ರಾಮ ಪಂಚಾಯಿತಿ ಸದಸ್ಯ ಹನೀಫ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪ್ರೌಢಶಾಲೆ ಮತ್ತು ಕಾಲೇಜು ಅಭಿವೃದ್ಧಿಗೆ ಸರಕಾರದಿಂದ ಸಹಕರಿಸಿದ ಮಮತಾ ಡಿಎಸ್. ಗಟ್ಟಿ ಮತ್ತು ಶಾಲಾ ಮುಖ್ಯ ಶಿಕ್ಷಕ ಸಂತೋಷ್ ಟಿ.ಎನ್ ಹಾಗೂ ಹಿರಿಯ ಶಿಕ್ಷಕ ಲಕ್ಷ್ಮಣ್ ಅವರನ್ನು ಸನ್ಮಾನಿಸಲಾಯಿತು.ಪ್ರೌಢ ಶಾಲಾ ಮುಖ್ಯ ಶಿಕ್ಷಕ ಸಂತೋಷ್ ಟಿ.ಎನ್ ಸ್ವಾಗತಿಸಿದರು. ಲಕ್ಷ್ಮಣ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ವನಿತಾ ದೇವಾಡಿಗ ವಂದಿಸಿದರು.


