UN NETWORKS
ತೊಕ್ಕೊಟ್ಟು: ಸಂತ ಸೆಬೆಸ್ತಿಯನ್ನರ ಧರ್ಮಕೇಂದ್ರ ಸಿಎಲ್ ಸಿ ಪೆರ್ಮನ್ನೂರು ಸಮುದಾಯದ 43 ನೇ ವಾರ್ಷಿಕೋತ್ಸವ ಸಮಾರಂಭ ಬಲಿಪೂಜೆ ಮೂಲಕ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತ ಸೆಬೆಸ್ತಿಯನ್ನರ ಚರ್ಚಿನ ಧರ್ಮಗುರು ಫಾ.ಜೆ.ಬಿ ಸಲ್ದಾನ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಹಾಯಕ ಗುರು ಫಾ.ಸ್ಟ್ಯಾನಿ ಪಿಂಟೋ,ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಮೆಲ್ವಿನ್ ಡಿಸೋಜ, ಕಾರ್ಯದರ್ಶಿ ರೊನಾಲ್ಡ್ ಫೆರ್ನಾಂಡಿಸ್ ಉಪಸ್ಥಿತರಿದ್ದರು.
ಇದೇ ಸಂದರ್ಭ ಕೆ ಎಸ್ ಆರ್ ಟಿಸಿ ಸಂಸ್ಥೆಯಲ್ಲಿ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಉತ್ತಮ ನಿರ್ವಾಹಕ ಎಂಬ ಪ್ರಶಂಸೆ ಹೊಂದಿರುವ ಉರ್ಬನ್ ಅಪೋಸ್ ಎಂಬವರನ್ನು ಸನ್ಮಾನಿಸಲಾಯಿತು. ಸಿ.ಎಲ್ ಸಿ ಅಧ್ಯಕ್ಷ ಜೋಸೆಫ್ ಡಿಸೋಜ ಸ್ವಾಗತಿಸಿದರು. ಸಹ ಕಾರ್ಯದರ್ಶಿ ಜೋಸೆಫ್ ಡೇಸಾ ವಂದಿಸಿದರು. ಮೌರೀಸ್ ಮೊಂತೇರೊ ಕಾರ್ಯಕ್ರಮ ನಿರೂಪಿಸಿದರು.


