Site icon Ullalavani

ಡಿ.15 ರಂದು ಸಾಂಸ್ಕೃತಿಕ ಸಮ್ಮೇಳನ ರತ್ನೋತ್ಸವ:ಭರದ ಸಿದ್ಧತೆ

UN NETWORKS

ಮಂಗಳೂರು: ಕರಾವಳಿ ಕರ್ನಾಟಕದ ಸಾಹಿತ್ಯ-ಸಾಂಸ್ಕೃತಿಕ ಸಮ್ಮೇಳನ ನಾಡು ನುಡಿ ವೈಭವದ ರತ್ನೋತ್ಸವ ಡಿಸೆಂಬರ್ 15 ರಂದು ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲಮಾಧ್ಯಮ ಶಾಲೆಯ ಗ್ರೀನ್ ಗ್ರೌಂಡ್ ನಲ್ಲಿ ನಡೆಯಲಿದೆ.ದೇರಳಕಟ್ಟೆ ವಿದ್ಯಾರತ್ನ ವಿದ್ಯಾಸಂಸ್ಥೆಯು ಸಂಸ್ಥಾಪಕ ಆಡಳಿತ ನಿರ್ದೇಶಕ ರವೀಂದ್ರ ಶೆಟ್ಟಿ ಉಳಿದೊಟ್ಟು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಈ ವಿಷಯ ತಿಳಿಸಿದರು.

ದೇರಳಕಟ್ಟೆ ಬೆಳ್ಮ ಪಂಚಾಯತ್ ವಠಾರದಿಂದ ಪೂರ್ಣ ಕುಂಭ ಸ್ವಾಗತದೊಂದಿಗೆ ಸಾಂಸ್ಕೃತಿಕ ದಿಬ್ಬಣ ಹೊರಡಲಿದ್ದು,ವಿಜಯ ಕೃಷ್ಣಪ್ಪ ಪೂಜಾರಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ ಎಂದು ಅವರು ತಿಳಿಸಿದರು.ರತ್ನ ಎಜ್ಯುಕೇಶನ್ ನ ಟ್ರಸ್ಟಿ ರತ್ನಾವತಿ ಕೆ.ಶೆಟ್ಟಿ ಅವರು ರತ್ನೋತ್ಸವದ ದ್ವಜಾರೋಹಣ ನೆರವೇರಿಸಲಿದ್ದಾರೆ.ರತ್ನೋತ್ಸವದ ಉದ್ಘಾಟಕರಾಗಿ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಆಗಮಿಸಲಿದ್ದು,ಹೆಸರಾಂತ ಸಾಹಿತಿ,ಕಥೆಗಾರ ನಾ.ಡಿಸೋಜ ಸಮ್ಮೇಳನಾಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಅಲ್ಲದೆ ಕಾರ್ಯಕ್ರಮದಲ್ಲಿ ವಿಚಾರಗೋಷ್ಠಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.ಜೊತೆಗೆ ಕವಿ ಕಾವ್ಯ,ಗಾನ,ಕುಂಚ,ಜನಪದ ಕುಣಿತ,ಯಕ್ಷಗಾನ ಮೊದಲಾದ ಕಾರ್ಯಕ್ರಮಗಳು ನಡೆಯಲಿದೆ ಎಂದು ರವೀಂದ್ರ ಶೆಟ್ಟಿ ಮಾಹಿತಿ ನೀಡಿದರು.ಸುದ್ದಿಗೋಷ್ಠಿಯಲ್ಲಿ ಕಾರ್ಯದರ್ಶಿ ಸೌಮ್ಯ ಆರ್ ಶೆಟ್ಟಿ,ಉಪಾಧ್ಯಕ್ಷ ಮೋಹನ್ ದಾಸ್ ಶೆಟ್ಟಿ,ಶಾಲಾ ಮುಖ್ಯೋಪಾಧ್ಯಾಯರಾದ ನಹೀಮ್ ಹಮೀದ್,ಸಂಸ್ಥೆಯ ಗೌರವ ಸಲಹೆಗಾರ ತೋನ್ಸೆ ಪುಷ್ಕಳ ಕುಮಾರ್ ಉಪಸ್ಥಿತರಿದ್ದರು.

Exit mobile version