ಉಳ್ಳಾಲ್ ನ್ಯೂಸ್ ಡೆಸ್ಕ್
ಉಳ್ಳಾಲ: ಪಾದಚಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಿಲಾರು ಲಕ್ಷ್ಮೀಗುಡ್ಡೆ ನಿವಾಸಿ ಸೋಮನಾಥ(೩೬)ಎಂಬವರು ಗಂಭೀರ ಗಾಯಗೊಂಡಿರುವ ಘಟನೆ ತೊಕ್ಕೊಟ್ಟು ವಿನಮ್ರಾ ಬಾರಿನ ಎದುರುಗಡೆ ನಿನ್ನೆ ಬೆಳಿಗ್ಗೆ ಸಂಭವಿಸಿದೆ.

ತೊಕ್ಕೊಟ್ಟು ಸಮೀಪ ಕೆಲಸಕ್ಕೆ ಹೋಗುವ ಸಂದರ್ಭ ರಸ್ತೆ ದಾಟುತ್ತಿದ್ದ ವೇಳೆ ನೆತ್ತಿಲಪದವಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ಅವರಿಗೆ ಡಿಕ್ಕಿ ಹೊಡೆದಿತ್ತು. ಬಸ್ಸಿನಡಿಗೆ ಸಿಲುಕಿದ ಅಶೋಕ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.




