UN NETWORKS
ಇರಾ: ಇರಾ ತಾಳಿತ್ತಬೆಟ್ಟು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಸೋಮವಾರ ಮಲಯಾಳಿ ಬಿಲ್ಲವ ಸಭಾಭವನದಲ್ಲಿ ನಡೆಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಅಧ್ಯಕ್ಷತೆ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ತಾಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಕುರ್ನಾಡು ಜಿಲ್ಲಾ ಪಂಚಾಯಿತಿ ಸದಸ್ಯೆ ಮಮತಾ ಡಿ.ಎಸ್.ಗಟ್ಟಿ, ಗ್ರಾಮ ಪಂಚಾಯಿತಿ ಸದಸ್ಯ ಮೊಯಿದಿನ್ ಕುಂಞ, ಎಸ್.ಡಿ.ಎಂ.ಸಿ ಅಧ್ಯಕ್ಷ ರಾಜೇಶ್ ಡಿಸೋಜ, ಮಾಜಿ ಅಧ್ಯಕ್ಷ ಮುರಳೀಧರ ಭಂಡಾರಿ, ಶಿಕ್ಷಕ ಸಂಯೋಜಕಿ ಸುಶೀಲಾ, ಇರಾ ಕಲ್ಲಾಡಿ ವಿಠಲ ಶೆಟ್ಟಿ ಸೇವಾ ಟ್ರಸ್ಟ್ ಅಧ್ಯಕ್ಷ ಜಗದೀಶ್ ಶೆಟ್ಟಿ, ಶ್ರೀ ಕ್ಷೇತ್ರ ಕದ್ರಿ ಮಾಜಿ ಟ್ರಸ್ಟಿ ನಿವೇದಿತಾ ಎನ್.ಶೆಟ್ಟಿ, ಗಣ್ಯರಾದ ಫ್ಲೋರಿನ್ ಡಿಸಿಲ್ವಾ, ಚಂದ್ರಿಕಾ ಹಾಗೂ ಪದ್ಮನಾಭ ರೈ ಉಪಸ್ಥಿತರಿದ್ದರು.
ಶಿಕ್ಷಕಿ ಶಶಿ ಬಿ. ಸ್ವಾಗತಿಸಿದರು. ಶಾಲಾ ಮುಖ್ಯ ಶಿಕ್ಷಕಿ ಸುಜಾತ ಟಿ.ಎಸ್. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕಿ ಸುಮಂಗಳಾ ಶರ್ಮಾ ವಂದಿಸಿದರು. ಶಿಕ್ಷಕ ಜಾನ್ ಫೆರ್ನಾಂಡಿಸ್ ಕಾರ್ಯಕ್ರಮ ನಿರೂಪಿಸಿದರು.




