UN NETWORKS
ಕೆ.ಸಿ.ರೋಡ್: ಶಾಲೆಗೆ ನುಗ್ಗಿದ ಕಳ್ಳರು ಬಾಗಿಲು ಒಡೆದು ವಿದ್ಯಾರ್ಥಿಗಳ ಪ್ರವಾಸಕ್ಕಾಗಿ ಸಂಗ್ರಹಿಸಲಾಗಿದ್ದ ರೂ.81,000 ನಗದು ಕಳವು ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ಯಾ ಫಲಾಹ್ ಶಿಕ್ಷಣ ಸಂಸ್ಥೆಯಲ್ಲಿ ಭಾನುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಶಾಲೆಯ ಮುಖ್ಯೋಪಾಧ್ಯಾಯರ ಮತ್ತು ಕಾಲೇಜು ಪ್ರಾಂಶುಪಾಲರ ಕೊಠಡಿಯ ಬೀಗ ಒಡೆದು ಬಾಗಿಲು ಮುರಿದು ಕಳ್ಳರು ಒಳನುಗ್ಗಿದ್ದಾರೆ. ಹೈಸ್ಕೂಲ್ ವಿದ್ಯಾರ್ಥಿಗಳ ಪ್ರವಾಸಕ್ಕಾಗಿ ಸಂಗ್ರಹಿಸಲಾಗಿದ್ದ ರೂ. 73,000 ನಗದು ಹಾಗೂ ಮುಖ್ಯೋಪಾಧ್ಯಾಯಿನಿ ಗೆ ಸೇರಿದ ರೂ.8,000 ನಗದು ಕಳವುಗೈದಿದ್ದಾರೆ. ಸ್ಥಳಕ್ಕೆ ಉಳ್ಳಾಲ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ವಿನಾಯಕ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.
ಗಾಂಜಾ ಮಾಫಿಯಾ ವಿರುದ್ಧ ದನಿ ಎತ್ತಿದ್ದರು : ಶನಿವಾರ ಫಲಾಹ್ ಶಿಕ್ಷಣ ಸಂಸ್ಥೆಯಲ್ಲಿ ಉಳ್ಳಾಲ ಪೊಲೀಸರ ಜಂಟಿ ಆಶ್ರಯದಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ ನಡೆದಿತ್ತು .ಇದೇ ವೇಳೆ ಗಾಂಜಾ ವಿಚಾರಕ್ಕೆ ಸಂಬಂಧಿಸಿ ಪ್ರಸ್ತಾಪ ನಡೆದಿತ್ತು. ಇದೇ ದ್ವೇಷದಿಂದ ಕಳವು ನಡೆದಿರುವ ಸಾಧ್ಯತೆಗಳಿರಬಹುದೆಂದು ಶಾಲಾ ಆಡಳಿತ ಮಂಡಳಿ ಸಂಶಯ ವ್ಯಕ್ತಪಡಿಸಿದೆ.


