ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ವಾರ್ಷಿಕ ಕ್ರೀಡಾಕೂಟ ಸಮಾರಂಭವು ಶುಕ್ರವಾರ ಮಂಗಳೂರು ವಿವಿಯ ಕ್ರೀಡಾಂಗಣದಲ್ಲಿ ನಡೆಯಿತು.
ಕ್ರೀಡಾಕೂಟವನ್ನು ಮಂಗಳೂರು ವಿಶ್ವವಿದ್ಯಾನಿಲಯದ ರಸಾಯನ ಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಪ್ರೊ.ಭೋಜ ಪೂಜಾರಿಯವರು ಉದ್ಘಾಟಿಸಿ ಕ್ರೀಡೆಯು ನಮ್ಮಲ್ಲಿ ಆರೋಗ್ಯವನ್ನು ಕಾಪಾಡುವುದರೊಂದಿಗೆ ಜೀವನದಲ್ಲಿ ಸದಾ ಚೈತನ್ಯವನ್ನು ನೀಡುತ್ತದೆ. ಆದ್ದರಿಂದ ಇಂತಹ ಕ್ರೀಡಾಕೂಟಗಳಲ್ಲಿ ಪ್ರತಿಯೊಬ್ಬರು ಭಾಗವಹಿಸಬೇಕು ಎಂದು ಹೇಳಿದರು.ಮಂಗಳೂರು ವಿಶ್ವವಿದ್ಯಾನಿಲಯದ ಜೀವವಿಜ್ಞಾನ ವಿಭಾಗದ ಪ್ರಾಧ್ಯಾಪಕರಾದ ಪ್ರೊ.ಪ್ರಶಾಂತ್ ನಾಯ್ಕ್ ಅವರು ಮಾತನಾಡಿ, ಮಂಗಳೂರು ವಿವಿಯ ಶಿಕ್ಷಕೇತರ ಉದ್ಯೋಗಿಗಳ ಸಂಘವು ಕಳೆದ ಹಲವಾರು ವರ್ಷಗಳಿಂದ ವಿವಿಯಲ್ಲಿ ಹಲವಾರು ಚಟುವಟಿಕೆಗಳನ್ನು ಹಮ್ಮಿಕೊಂಡು ಬಂದಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಿಕ್ಷಕೇತರ ಉದ್ಯೋಗಿಗಳ ಸಂಘದ ಅಧ್ಯಕ್ಷರಾದ ಕಮಲಾಕ್ಷಿ ಪಿ.ಶೆಟ್ಟಿ, ಕಾರ್ಯದರ್ಶಿ ತಝ್ನೀಜ್ ಬಾನು, ಕ್ರೀಡಾ ಸಂಚಾಲಕರಾದ ರವಿ.ಎಚ್.ಎಂ, ಖಚಾಂಚಿ ಸುಮಂಗಲಿ, ಮಾಧವ ಸೋಮೇಶ್ವರ, ವೈದ್ಯಕೀಯ ನಿಧಿಯ ಶಿವಾನಂದ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. ಹರೀಶ್ ಪೂಜಾರಿ ಹಾಗೂ ಚಂದ್ರ ಕಾರ್ಯಕ್ರಮ ನಿರೂಪಸಿದರು. ಬಳಿಕ ವಿವಿದ ಕ್ರೀಡಾಕೂಟಗಳಲ್ಲಿ ಸಂಘದ ಸದಸ್ಯರು ಭಾಗವಹಿಸಿದರು.