Site icon Ullalavani

ಮಂಗಳೂರು ಬಿಷಪ್ ಅವರಿಂದ ತೊಕ್ಕೊಟ್ಟು ವಿಠೋಭ ಮಂದಿರಕ್ಕೆ ಸೌಹಾರ್ದ ಭೇಟಿ

UN NETWORKS

ತೊಕ್ಕೊಟ್ಟು: ತೊಕ್ಕೊಟ್ಟು ಸಂತ ಸೆಬೆಸ್ತಿಯನ್ನರ ಚರ್ಚಿನಲ್ಲಿ ಸಂಭ್ರಮದ ಕ್ರಿಸ್ ಮಸ್ ಹಬ್ಬದ ಆಚರಣೆ ನಡೆಯಿತು.
ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮಂಗಳೂರು ಬಿಷಪ್ ಫಾ. ಪೀಟರ್ ಪೌಲ್ ಸಲ್ದಾನ್ಹ ಭಾಗವಹಿಸಿದರು. ಚರ್ಚ್ ಧರ್ಮಗುರು ಫಾ. ಜೆಬಿ ಸಲ್ದಾನ್ಹ ಜೊತೆಗಿದ್ದರು.

ಭಜನಾ ಮಂದಿರಕ್ಕೆ ಸೌಹಾರ್ದ ಭೇಟಿ : ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ಮಂಗಳೂರು ಬಿಷಪ್ ಡಾ| ಪೀಟರ್ ಪೌಲ್ ಸಲ್ದಾನ್ಹ, ಸಚಿವ ಯು.ಟಿ.ಖಾದರ್ ಅವರ ನೇತೃತ್ವದಲ್ಲಿ ಚರ್ಚ್ ಆಡಳಿತ ಮಂಡಳಿ ಸದಸ್ಯರು , ಚರ್ಚಿನ ಹತ್ತಿರದಲ್ಲೇ ಇರುವ ಶ್ರೀ ವಿಠೋಭ ರುಕ್ಮಯೀ ಭಜನಾ ಮಂಡಳಿ ವಾರ್ಷಿಕೋತ್ಸವ ಸಮಾರಂಭಕ್ಕೆ ಭೇಟಿ ನೀಡಿ, ಕ್ರಿಸ್‍ಮಸ್ ಹಬ್ಬದ ಸಿಹಿತಿಂಡಿಗಳನ್ನು ಹಂಚಿಕೊಂಡರು.
ಇದೇ ಸಂದರ್ಭ ಮಾತನಾಡಿದ ಬಿಷಪ್ ಪೌಲ್ ಸಲ್ದಾನ್ಹ ಮಂದಿರದ ವಾರ್ಷಿಕೋತ್ಸವ ಸಮಾರಂಭದ ಶುಭಾಷಯಗಳನ್ನು ಸಲ್ಲಿಸಿದರು. ಕ್ರಿಸ್ ಮಸ್ ಹಬ್ಬದ ಮತ್ತು ಮಂದಿರದ ವಾರ್ಷಿಕೋತ್ಸವ ಆಚರಣೆ ಮೂಲಕ ಎಲ್ಲರಿಗೂ ದೇವರ ಆಶೀರ್ವಾದ ದೊರೆಯಲಿ. ಕುಟುಂಬಗಳು ಸಂತಸದಿಂದ ಬಾಳಲಿ ಎಂದು ಹಾರೈಸಿದರು.

ಸಚಿವ ಯು.ಟಿ.ಖಾದರ್ ಮಾತನಾಡಿ ` ಬಿಷಪ್ ಅವರ ಸೌಹಾರ್ದ ಭೇಟಿಯಿಂದಾಗಿ ಪ್ರೀತಿ ವಿಶ್ವಾಸ ಹಂಚುವ ಅವಕಾಶವಾಗಿದೆ. ಕ್ರಿಸ್‍ಮಸ್ ಹಬ್ಬ ಎಲ್ಲರೂ ಸೇರಿಸಿಕೊಂಡು ಆಛರಿಸುವಂತಹ ಹಬ್ಬವಾಗಿದೆ. ಈ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ದೊರೆಯಲಿ. ದೇವಸ್ಥಾನದ ಸರ್ವ ಸಮಿತಿಯವರನ್ನು ಅಭಿನಂದಿಸಿದರು.ಇದೇ ಸಂದರ್ಭ ಕಾಂಗ್ರೆಸ್ ಮುಖಂಡರುಗಳಾದ ಸುರೇಶ್ ಭಟ್ನಗರ, ಬಾಝಿಲ್ ಡಿಸೋಜ, ಮಂದಿರದ ಅಧ್ಯಕ್ಷ ಪದ್ಮನಾಭ, ಮೋಹನ್ ಬಂಗೇರ, ಚೇತನ್ ಕುಮಾರ್ ಶೆಟ್ಟಿ, ಸಚ್ಚೀಂದ್ರ ಸಾಲ್ಯಾನ್ ಮುಂತಾದವರು ಉಪಸ್ಥಿತರಿದ್ದರು.

Exit mobile version