UN NETWORKS
ಮಂಗಳೂರು: ಸಿಆರ್‌ಝೆಡ್ ವ್ಯಾಪ್ತಿಯ ಜಪ್ಪಿನಮೊಗರು, ಹರೇಕಳದಲ್ಲಿ ಪರವಾನಿಗೆಯಿಲ್ಲದೆ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ದಾಳಿ ನಡೆಸಿ 12ಕ್ಕೂ ಅಧಿಕ ಬೋಟುಗಳನ್ನು ವಶಪಡಿಸಿಕೊಂಡಿದ್ದಾರೆ.
ಮರಳು ಕಾರ್ಮಿಕರು ಪರಾರಿ: ಜಿಲ್ಲಾಧಿಕಾರಿಯ ಸೂಚನೆ ಮೇರೆಗೆ ಗಣಿ ಮತ್ತು ಭೂವಿಜ್ಞಾನ, ಕಂದಾಯ ಇಲಾಖೆ ಅಧಿಕಾರಿಗಳು ಶುಕ್ರವಾರ ಹರೇಕಳ, ಜಪ್ಪಿನಮೊಗರುವಿನ ಮರಳುಗಾರಿಕೆ ಪ್ರದೇಶಕ್ಕೆ ದಾಳಿ ನಡೆಸಿದ್ದಾರೆ. ಈ ವೇಳೆ 12 ದೋಣಿಗಳನ್ನು ವಶಪಡಿಸಿಕೊಂಡು ಜಪ್ಪಿನಮೊಗರುವಿನಲ್ಲಿರುವ ಜಿಲ್ಲಾಡಳಿತ ಯಾರ್ಡ್‌ಗೆ ಸ್ಥಳಾಂತರಿಸಲಾಗಿದೆ. ಅಧಿಕಾರಿಗಳನ್ನು ಕಂಡು ಮರಳು ಕಾರ್ಮಿಕರು ಪರಾರಿಯಾಗಿದ್ದಾರೆ.ಕಾರ್ಯಾಚರಣೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಜಿಯೋಲಾಜಿಸ್ಟ್ ಪದ್ಮಶ್ರೀ, ಮೂರ್ತಿ, ಕಂದಾಯ ಇಲಾಖೆಯ ಸಹಾಯಕ ಕಮಿಷನರ್ ರವಿಚಂದ್ರ ನಾಯಕ್, ಗ್ರಾಮಾಂತರ ಠಾಣಾ ಪೊಲೀಸರು ಭಾಗವಹಿಸಿದ್ದರು.