UN NETWORKS
ನರಿಂಗಾನ: ಗ್ರಾಮೀಣ ಪ್ರದೇಶದಲ್ಲಿ ಇರುವ ಕೋಲ್ಲರಕೋಡಿ ಶಾಲೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯ ಸರಕಾರದಿಂದ ಪಡೆಯುದರಲ್ಲಿ ಯಶಸ್ವಿಯಾಗಿದೆ ಎಂದು ಉಸ್ತುವಾರಿ ಸಚಿವ ಯು.ಟಿ ಖಾದರ್ ಹೇಳಿದರು.
ಜಿ.ಪಂ ಸದಸ್ಯೆ ಮಮತ ಡಿ.ಎಸ್ ಗಟ್ಟಿ ದೀಪಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಶಿಕ್ಷಣ ಎಂಬುದು ಜೀವನ ಪ್ರಾಮುಖ್ಯ ಅಂಗವಾಗಿದೆ. ಶಿಕ್ಷಣ ಪಡೆದಾಗ ಮಾತ್ರ ಮನುಷ್ಯ ಮನುಷ್ಯನಾಗಿ ಪರಿವರ್ತನೆಯಾಗುತ್ತಾನೆ. ವಿದ್ಯಾರ್ಥಿಗಳು ಗುರು ಹಿರಿಯರಿಗೆ ಗೌರವಿಸಿ ವಿದ್ಯೆ ಪಡೆದಾಗ ಮುಂದೆ ಉತ್ತಮ ಭವಿಷ್ಯ ರೂಪಿಸಲು ಸಾಧ್ಯ ಎಂದು ಹೇಳಿದರು.ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಅಬ್ದುಲ್ ರಝಾಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ನರಿಂಗಾನ ಗ್ರಾ.ಪಂ ಅಧ್ಯಕ್ಷ ಇಸ್ಮಾಯಿಲ್ ಮೀನಕೋಡಿ, ಉಪಾಧ್ಯಕ್ಷ ನಳಿನಾಕ್ಷಿ, ಸದಸ್ಯರಾದ ಅಬ್ದುಲ್ ಖಾದರ್, ಸುಜಾತ, ಅಶ್ರಫ್ ಎಸ್.ಎಚ್, ಮುರುಳೀಧರ್ ಶೆಟ್ಟಿ ಮೋರ್ಲ, ಹಳೇ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ನವಾಝ್ ಕೋಲ್ಲರಕೋಡಿ, ಕಜೆ ಕಿರಿಯ ಪ್ರಾಥಮಿಕ ಶಾಲಾ ಸಹಶಿಕ್ಷಕ ಮುಹಮ್ಮದ್ ಮಾಸ್ಟರ್ ಕಲ್ಕಟ್ಟ, ಸಿದ್ದೀಕ್ ಪಾರೆ, ವರ್ಕಾಡಿ ಗ್ರಾ.ಪಂ ಮಾಜಿ ಸದಸ್ಯ ಅಬ್ದುಲ್ರಝಾಕ್, ಸ್ಥಳೀಯ ಸಿಆರ್ ಪಿ ಅಶಾಲತ, ಪ್ರೆಮಾನಂದ ರೈ ಮುಂತಾದವರು ಈ ಸಂದರ್ಭ ಉಪಸ್ಥಿತರಿದ್ದರು.ಈ ಸಂದರ್ಭ ಹೆಚ್ಚುಅಂಕಗಳಿಸಿದ ವಿದ್ಯಾರ್ಥಿನಿ ಭವ್ಯಶ್ರೀ ಬಿ.ಪಿ ಮತ್ತು ಜೀವಿತಾ ರವರನ್ನು ಸನ್ಮಾನಿಸಲಾಯಿತು.ಶಾಲಾ ಮುಖ್ಯೋಪಾಧ್ಯಾಯಿನಿ ಶೀಲಾವತಿ ಸ್ವಾಗತಿಸಿದರು.ಸಹಶಿಕ್ಷಕ ರಘು ಎಚ್ ವಂದಿಸಿದರು. ಸಹ ಶಿಕ್ಷಕ ಬಿ.ಕೆ ವಸಂತ್ ರೈ ಕಾರ್ಯಕ್ರಮ ನಿರೂಪಿದರು.