UN NETWORKS
ಕೈರಂಗಳ: ಬಂಟ್ವಾಳ ತಾಲೂಕಿನ ಕೈರಂಗಳ ಗ್ರಾಮದ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಸಂಘದ ವಾರ್ಷಿಕೋತ್ಸವ ಯಕ್ಷಗಾನ ಸಂಘದ ವಠಾರದಲ್ಲಿ ಭಾನುವಾರ ನಡೆಯಿತು.ಪ್ರಗತಿಪರ ಕೃಷಿಕ ಕಾಂತಿಲ ಲಕ್ಷೀ ನಾರಾಯಾಣ ಭಟ್ ಅಧ್ಯಕ್ಷತೆ ವಹಿಸಿದ್ದರು.
ಹೂ ಹಾಕುವ ಕಲ್ಲಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ನಾಗರಾಜ ಪದಕಣ್ಣಾಯ, ಬಾಳೆಪುಣಿ ಗ್ರಾಮ ಪಂಚಾಯಿತಿ ಸದಸ್ಯೆ ಸಂಧ್ಯಾ ಕಿಶೋರ್ ಗಟ್ಟಿ ಹಾಗೂ ಕೂಟತ್ತಜೆ ಶ್ರೀ ಉಳ್ಳಾಲ್ತಿ ಅಮ್ಮನವರ ಸೇವಾ ಸಮಿತಿಯ ಅಧ್ಯಕ್ಷ ಸತೀಶ್ ಜೋಗಿ ಬದಿಯಾರು ಉಪಸ್ಥಿತರಿದ್ದರು.ಭಾಗವತ ರಾಜಾರಾಮ ಹೊಳ್ಳ ಸ್ವಾಗತಿಸಿದರು. ಪತ್ರಕರ್ತ ಚಂದ್ರಹಾಸ ಕಣಂತೂರು ಕಾರ್ಯಕ್ರಮ ನಿರೂಪಿಸಿದರು. ಕೆಎಸ್ಆರ್ಟಿಸಿ ಸಿಬ್ಬಂದಿ ಪದ್ಮನಾಭ ಗಟ್ಟಿ ವಂದಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮ ಅಂಗವಾಗಿ ಸಂಘದ ಬಾಲ ಕಲಾವಿದರಿಂದ ನರಕಾಸುರ ಮೋಕ್ಷ ಹಾಗೂ ಸಂಘದ ಸದಸ್ಯರು ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಕಾಯಕಲ್ಪ ಯಕ್ಷಗಾನ ಬಯಲಾಟ ಪ್ರದರ್ಶನ ನಡೆಯಿತು.


