UN NETWORKS
ಕುರ್ನಾಡು: ಜಿಲ್ಲಾ ಪಂಚಾಯಿತಿ, ಬಂಟ್ವಾಳ ತಾಲೂಕು ಪಂಚಾಯಿತಿ, ಸ್ವಚ್ಛ ಭಾರತ ಮಿಷನ್ ಸಹಕಾರದಲ್ಲಿ ಕುರ್ನಾಡು ಗ್ರಾಮ ಪಂಚಾಯಿತಿ ವತಿಯಿಂದ ಬುಧವಾರ ಕುರ್ನಾಡು ಗ್ರಾ.ಪಂ. ಸಭಾಂಗಣದಲ್ಲಿ ನಡೆದ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಕಾರ್ಯಕ್ರಮ ನಡೆಯಿತು.
ಜಿಲ್ಲಾ ಸ್ವಚ್ಛತಾ ರಾಯಭಾರಿ ಶೀನ ಶೆಟ್ಟಿ ಸ್ವಚ್ಛತೆ ಬಗ್ಗೆ ಮಾಹಿತಿ ನೀಡಿದರು. ಕುರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೈಲಜಾ ಮಿತ್ತಕೋಡಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ನಿತಿನ್ ಗಟ್ಟಿ, ಸದಸ್ಯರಾದ ಶಿವಶಂಕರ್, ಗೋಪಾಲ ಬಂಗೇರ, ಜನಶಿಕ್ಷಣ ಟ್ರಸ್ಟ್ ನಿರ್ದೇಶಕ ಕೃಷ್ಣ ಮೂಲ್ಯ ಉಪಸ್ಥಿತರಿದ್ದರು.ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೇಶವ ಸ್ವಾಗತಿಸಿದರು.


