UN NETWORKS
ಕೋಟೆಕಾರು:. ಶಬರಿಮಲೆಗೆ ಮಹಿಳೆಯರ ಪ್ರವೇಶ, ಸಾಹಿತಿ ಭಗವಾನ್ ಶ್ರೀ ರಾಮಚಂದ್ರನ ವಿರುದ್ಧ ಹಾಗೂ ಪ್ರವಾದಿ(ಸ) ವಿರುದ್ಧದ ಹೇಳಿಕೆ ಖಂಡಿಸಿ ಸೋಮವಾರ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೀರಿಯಲ್ಲಿ ಪ್ರತಿಭಟನೆ ನಡೆಯಿತು.
ಈ ಸಂದರ್ಭ ವಿಧಾನಪರಿಷತ್ ಸದಸ್ಯ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಬಂಟ್ವಾಳ ತಾ.ಪಂ.ಮಾಜಿ ಉಪಾಧ್ಯಕ್ಷ ಉಮ್ಮರ್ ಪಜೀರ್ ,ಜಿಲ್ಲಾ ಪಂಚಾಯಿತಿ ಸದಸ್ಯೆ ಮಮತಾ ಗಟ್ಟಿ, , ಮೂಡಾದ ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿ ಅಸೈಗೋಳಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಮುಸ್ತಫಾ ಮಲಾರ್, ಹಿಂದುಳಿದ ವರ್ಗಗಳ ವಿಭಾಗಾಧ್ಯಕ್ಷ ದಿನೇಶ್ ಕುಂಪಲ, ನಗರಸಭಾ ಮಾಜಿ ಸದಸ್ಯ ದಿನೇಶ್ ರೈ, ಅಲ್ಪಸಂಖ್ಯಾತ ವಿಭಾಗ ಅಧ್ಯಕ್ಷ ಆಲ್ವಿನ್ ಡಿಸೋಜ ಉಪಸ್ಥಿತರಿದ್ದರು. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಕೋಡಿಜಾಲ್ ಸ್ವಾಗತಿಸಿದರು.


