UN NETWORKS
ಉಳ್ಳಾಲ: ಮೋಟಾರುವಾಹನ ಮಸೂದೆಯನ್ನು ಹಿಂಪಡೆಯಬೇಕು ಹಾಗೂ ಅಸಂಘಟಿತ ವಲಯದ ಸಾರಿಗೆ ಕಾರ್ಮಿಕರಿಗೆ ಸುರಕ್ಷತಾ ಕಾಯ್ದೆ ಜಾರಿಯಾಗಬೇಕು ಎಂದು ವಿವಿಧ ಬೇಡಿಕೆಯನ್ನು ಮುಂದಿಟ್ಟು ಜ.8 ಮತ್ತು 9ರಂದು ಭಾರತ್ ಬಂದ್ ಗೆ ಕರೆ ನೀಡಿದ ಹಿನ್ನೆಲೆ ಇಂದು ಮಂಗಳೂರಿನಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆಯನ್ನು ಮಾಡಿದ್ದಾರೆ.ಖಾಸಗಿ ಬಸ್ ಗಳು ಸಂಚಾರಿಸುತ್ತಿದ್ದು ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕುತ್ತಾರುವಿನಲ್ಲಿ ಟಯರಿಗೆ ಬೆಂಕಿ ಹಚ್ಚಿ ವಾಹನ ತಡೆಗೆ ಯತ್ನ ನಡೆಸಿದ ಘಟನೆ ನಡೆದಿದೆ. ಉಳ್ಳಾಲದಲ್ಲೂ ಎಂದಿನಂತೆ ರಸ್ತೆಗಿಳಿದ ಕೆ ಎಸ್ ಆರ್ ಟಿಸಿ , ಖಾಸಗಿ ಬಸ್ಸುಗಳು ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.


