UN NETWORKS
ತಲಪಾಡಿ: ಮನೆಯೊಂದು ಬೆಂಕಿಗೆ ಆಹುತಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತಲಪಾಡಿ ಮರೋಳಿ ಬಾರಿನ ಸಮೀಪ ಸೋಮವಾರ ತಡರಾತ್ರಿ ವೇಳೆ ಸಂಭವಿಸಿದೆ. ಮನೆಯೊಳಗಿದ್ದ ಒಬ್ಬರು ಅಪಾಯದಿಂದ ಪಾರಾಗಿದ್ದಾರೆ.
ಹರಿಪ್ರಸಾದ್ ಶೆಟ್ಟಿ ಎಂಬವರಿಗೆ ಸೇರಿದ ಮನೆ ಬೆಂಕಿಗೆ ಆಹುತಿಯಾಗಿದೆ. ಜಯಲಕ್ಷ್ಮೀ ಅನ್ನುವ ಗ್ಯಾರೇಜ್ ಮಾಲೀಕರಾಗಿರುವ ಇವರ ಮನೆಯೂ ಗ್ಯಾರೇಜಿನ ಜತೆಗಿದೆ. ಅವರು ಕುಟುಂಬ ಸಮೇತ ಬೇರೆ ಪ್ರದೇಶದಲ್ಲಿ ಮನೆಯಲ್ಲಿದ್ದಾರೆ. ಬೆಂಕಿಗೆ ಆಹುತಿಯಾದ ಮನೆಯಲ್ಲಿ ಗ್ಯಾರೇಜ್ ಸಿಬ್ಬಂದಿ ಓರ್ವರೇ ಇದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ. ಘಟನೆಗೆ ವಿದ್ಯುತ್ ಶಾರ್ಟ್ ಸಕ್ರ್ಯೂಟ್ ಕಾರಣವೆಂದು ಶಂಕಿಸಲಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಮನೆ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


