Site icon Ullalavani

ದೇರಳಕಟ್ಟೆ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ

UN NETWORKS

ದೇರಳಕಟ್ಟೆ : ಬದ್ರಿಯ ಜುಮಾ ಮಸೀದಿ ಅಧೀನದ ದೇರಳಕಟ್ಟೆ ಪಬ್ಲಿಕ್ ಸ್ಕೂಲ್ ಇದರ 7ನೇ ವಾರ್ಷಿಕೋತ್ಸವ ದೇರಳಕಟ್ಟೆಯ ಖಾಸಗಿ ಹಾಲ್ ನಲ್ಲಿ ನಡೆಯಿತು.ದೇರಳಕಟ್ಟೆ ಪಬ್ಲಿಕ್ ಸ್ಕೂಲ್ ಮದರಸ ಅಧ್ಯಾಪಕ ಕೆ.ಯು ಅಬ್ದುಲ್‌ ಜಬ್ಬಾರ್ ದುಅ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ ಖಾದರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭಹಾರೈಸಿದರು.ದೇರಳಕಟ್ಟೆ ಎಜ್ಯುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಹಾಜಿ ಅಬೂಬಕ್ಕರ್ ನಾಟೆಕಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.ಅತಿಥಿಗಳಾಗಿ ದೇರಳಕಟ್ಟೆ ಬದ್ರಿಯ ಜುಮಾ ಮಸೀದಿ ಅಧ್ಯಕ್ಷ ಹಾಜಿ ಡಿ. ಅಬ್ಬಾಸ್, ಮದರಸ ಮ್ಯಾನೇಜ್ ಮೆಂಟ್ ದೇರಳಕಟ್ಟೆ ರೇಂಜ್ ಅಧ್ಯಕ್ಷ ಹಾಜಿ ಡಿ. ಇಸ್ಮಾಯಿಲ್, ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್ ದೇರಳಕಟ್ಟೆ ಇದರ ಅಧ್ಯಕ್ಷ ಹಾಜಿ ಡಿ. ಇಲ್ಯಾಸ್, ಬೆಳ್ಮ ಗ್ರಾ.ಪಂ ಅಧ್ಯಕ್ಷ ವಿಜಯ ಕೃಷ್ಣ ಪ್ಪ ಪೂಜಾರಿ, ಉಪಾಧ್ಯಕ್ಷ ಬಿ.ಎಂ ಅಬ್ದುಲ್ ಸತ್ತಾರ್, ಸದಸ್ಯ ಕಬೀರ್.ಡಿ, ದ.ಕ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್, ಜಿ.ಪಂ ಮಾಜಿ ಸದಸ್ಯ ಹಾಜಿ ಅಬ್ದುಲ್ ಅಝೀಝ್ ಮಲಾರ್, ಮಂಗಳೂರು ವಿ.ವಿಯ ಪತ್ರಿಕೋದ್ಯಮದ ಮುಖ್ಯಸ್ಥ ಪ್ರೋ. ಬಿ.ಎಲ್ ಧರ್ಮ, ಕರ್ನಾಟಕ ಅನುದಾನಿತ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎಂ.ಕೆ ಮಂಜನಾಡಿ, ಮಂಗಳೂರು ದ.ಕ ಅನುದಾನಿತ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಎಚ್ ಮಲಾರ್, ಕೋಟೆಕಾರ್ ಪಟ್ಟಣ ಪಂಚಾಯತ್ ಸದಸ್ಯ ಮುಹಮ್ಮದ್ ಪುಷ್ಟಿ.ದೇರಳಕಟ್ಟೆ ಎಜ್ಯುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಪ್ರ.ಕಾರ್ಯದರ್ಶಿ ಡಿ.ಉಸ್ಮಾನ್, ಕೋಶಾಧಿಕಾರಿ ಹಾಜಿ ಯಾಸೀನ್ ಮುಹಮ್ಮದ್, ಜೊತೆ ಕಾರ್ಯದರ್ಶಿಗಳಾದ ಅಬ್ದುಲ್ ಖಾದರ್ ಐ, ಅಬ್ದುಲ್ ಮುತ್ತಲಿಬ್ ಮುಂತಾದವರು ಉಪಸ್ಥಿತರಿದ್ದರು.

ಸಂಸ್ಥೆ ಸಂಚಾಲಕ ಬಿ.ಅಬ್ದುಲ್ ರಹೀಂ ವರದಿ ವಾಚಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಫಾತಿಮತ್ ಝೋಹರಾ ಸ್ವಾಗತಿಸಿದರು. ಶಿಕ್ಷಕಿ ಮಿಶ್ರಿಯ ವಂದಿಸಿದರು.

Exit mobile version